Job Description: * ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕರ ಗ್ಲೋಬಲ್ ಹೆಲ್ತ್ ಲೀಡರ್ಸ್ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವ ಆಶಾ ಕಾರ್ಯಕರ್ತೆಯರ ಇಡೀ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.* ಆರೋಗ್ಯವಂತ ಭಾರತವನ್ನು ಖಾತ್ರಿಪಡಿಸುವಲ್ಲಿ ಆಶಾ ಕಾರ್ಯಕರ್ತರು ಮುಂಚೂಣಿಯಲ್ಲಿದ್ದಾರೆ ಮತ್ತು ಅವರ ಸಮರ್ಪಣೆ ಮತ್ತು ಸಂಕಲ್ಪ ಪ್ರಶಂಸನೀಯವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.* "ಇಡೀ ಆಶಾ ಕಾರ್ಯಕರ್ತರ ತಂಡಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ( @WHO ) ಮಹಾ ನಿರ್ದೇಶಕರ ಗ್ಲೋಬಲ್ ಹೆಲ್ತ್ ಲೀಡರ್ಸ್ ಪ್ರಶಸ್ತಿಯನ್ನು ನೀಡಲಾಗಿದೆ ಎಂಬುದು ಬಹಳ ಸಂತೋಷದ ವಿಷಯವಾಗಿದೆ. ಎಲ್ಲಾ ಆಶಾ ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು. ಅವರು ಆರೋಗ್ಯಕರ ಭಾರತವನ್ನು ಖಾತ್ರಿಪಡಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರ ಸಮರ್ಪಣೆ ಮತ್ತು ದೃಢತೆ ಪ್ರಶಂಸನೀಯವಾಗಿದೆ." ಎಂದು ಪ್ರಧಾನಮಂತ್ರಿಯವರು ಈ ರೀತಿ ಸಂದೇಶ ವನ್ನು ವ್ಯಕ್ತ ಪಡಿಸಿದ್ದಾರೆ.