Job Description: * ಮೇ 31 ರಂದು ಶಿಮ್ಲಾಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ 'ಗರೀಬ್ ಕಲ್ಯಾಣ್ ಸಮ್ಮೇಳನ'ದಲ್ಲಿ ಭಾಗವಹಿಸಲಿದ್ದಾರೆ.* ಮೋದಿ ಸರ್ಕಾರ ಎಂಟು ವರ್ಷ ಪೂರೈಸಿದ ಸಂದರ್ಭದಲ್ಲಿ ದೇಶಾದ್ಯಂತ ಗರೀಬ್ ಕಲ್ಯಾಣ್ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.* ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 31, 2022ರಂದು ಶಿಮ್ಲಾ ಮತ್ತು, ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮತ್ತು 'ಗರೀಬ್ ಕಲ್ಯಾಣ ಸಮ್ಮೇಳನ'ದಲ್ಲಿ ಭಾಗವಹಿಸಲಿದ್ದಾರೆ.* ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಈ ಸುಸಂದರ್ಭದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ದೇಶದಾದ್ಯಂತ ಎಲ್ಲಾ ರಾಜ್ಯ ರಾಜಧಾನಿಗಳಲ್ಲಿ, ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ.* ದೇಶದ ನಾಗರಿಕರ ಜೀವನ ಸೌಕರ್ಯ-ಸೌಲಭ್ಯ ವ್ಯವಸ್ಥೆಗಳನ್ನು ಸುಧಾರಿಸಲು, ಉದ್ಧೇಶಿತ ಜನರ ಬಳಿಗೆ ಸರ್ಕಾರಿ ಕಾರ್ಯಕ್ರಮಗಳ ತಲುಪುವಿಕೆ ಮತ್ತು ವಿತರಣೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವುದು ಈ ಪ್ರಯತ್ನವಾಗಿದೆ.* ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಮ್-ಕಿಸಾನ್ ) ಯೋಜನೆಯಡಿಯಲ್ಲಿ ನೀಡುವ ಆರ್ಥಿಕ ಪ್ರಯೋಜನದ 11 ನೇ ಕಂತುನ್ನು ಪ್ರಧಾನಮಂತ್ರಿ ಅವರು ಬಿಡುಗಡೆ ಮಾಡಿದ್ದಾರೆ.