Job Description: * ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿಯಲ್ಲಿ 11 ನೇ ಕಂತು ಆರ್ಥಿಕ ಪ್ರಯೋಜನವನ್ನು ಪ್ರಧಾನ ಮಂತ್ರಿ ಬಿಡುಗಡೆ ಮಾಡಿದ್ದಾರೆ.* 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 21,000 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.* ಪ್ರಧಾನಮಂತ್ರಿ ನೇತೃತ್ವದ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಈ ಸಾರ್ವಜನಿಕ ಕಾರ್ಯಕ್ರಮವನ್ನು ದೇಶದಾದ್ಯಂತ ರಾಜ್ಯ ರಾಜಧಾನಿಗಳು, ಜಿಲ್ಲಾ ಕೇಂದ್ರಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.* ದೇಶದ ನಾಗರಿಕರ ಜೀವನ ಸೌಕರ್ಯವನ್ನು ಸುಧಾರಿಸಲು ಸರ್ಕಾರಿ ಕಾರ್ಯಕ್ರಮಗಳ ತಲುಪುವಿಕೆ ಮತ್ತು ವಿತರಣೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವುದು ಈ ಸಮ್ಮೇಳನದ ಪ್ರಯತ್ನವಾಗಿದೆ. * ಮೊಟ್ಟಮೊದಲ ಬಾರಿಗೆ ರಾಷ್ಟ್ರಾದ್ಯಂತ ಎಲ್ಲಾ ಜಿಲ್ಲೆಗಳನ್ನು ಒಳಗೊಂಡಂತೆ ಏಕಕಾಲಕ್ಕೆ ಪ್ರಧಾನ ಮಂತ್ರಿ ಮೋದಿ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ಅತಿ ದೊಡ್ಡ ಕಾರ್ಯಕ್ರಮ ಇದಾಗಿದೆ.