Job Description: * ಅಜರ್‌ಬೈಜಾನ್‌ನ ಬಾಕುನಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್‌ನಲ್ಲಿ ಭಾರತದ ಅನುಭವಿ ಶೂಟರ್ ಅಂಜುಮ್ ಮೌದ್ಗಿಲ್ ಅವರು ಬೆಳ್ಳಿ ಪದಕ ಗೆದ್ದುಕೊಂಡರು.* ಮಹಿಳೆಯರ 50 ಮೀಟರ್ ರೈಫಲ್ 3 ಪೊಸಿಷನ್ಸ್‌ನಲ್ಲಿ ಅಂಜುಮ್ ಮೌದ್ಗಿಲ್ ಅವರು ಬೆಳ್ಳಿ ಗೆಲ್ಲುವ ಮೂಲಕ ಭಾರತ ಪದಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದೆ.* ಫೈನಲ್ ಪಂದ್ಯದಲ್ಲಿ ಅಂಜುಮ್‌ ಅವರು 12–16ರಿಂದ ಡೆನ್ಮಾರ್ಕ್‌ನ ರಿಕ್ಕೆ ಮಯಿಂಗ್ ಇಬ್ಸೆನ್ ಅವರು ವಿರುದ್ಧ ಸೋಲು ಅನುಭವಿಸುವ ಮೂಲಕ ಬೆಳ್ಳಿಗೆ ತಮ್ಮದಾಗಿಸಿಕೊಂಡರು.* ವಿಶ್ವ ಚಾಂಪಿಯನ್‌ಷಿಪ್ ಬೆಳ್ಳಿ ಪದಕ ವಿಜೇತೆಯಾಗಿರುವ ಅಂಜುಮ್‌, ರ‍್ಯಾಂಕಿಂಗ್ ಸುತ್ತಿನಲ್ಲಿ 600ರ ಪೈಕಿ 587 ಪಾಯಿಂಟ್ಸ್ ಗಳಿಸಿದರು.* ಅಂಜುಮ್ ಅವರಿಗೆ ವಿಶ್ವಕಪ್‌ನಲ್ಲಿ ಇದು ಎರಡನೇ ಬೆಳ್ಳಿ ಪದಕವಾಗಿದೆ.