Job Description: * ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಭಾರತದ ಜೈವಿಕ ತಂತ್ರಜ್ಞಾನ ಇಲಾಖೆಯ(ಡಿಬಿಟಿ) ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಹಾಗೂ ಅಮೆರಿಕದ ಅಂತಾರಾಷ್ಟ್ರೀಯ ಲಸಿಕೆ ಉಪಕ್ರಮ(ಐಎವಿಐ)ದ ನಡುವೆ ಎಚ್ಐವಿ, ಕ್ಷಯರೋಗ, ಕೋವಿಡ್-19 ಮತ್ತು ಇತರೆ ಹೊಸದಾಗಿ ಕಾಣಿಸಿಕೊಳ್ಳುತ್ತಿರುವ ಸಾಂಕ್ರಾಮಿಕ ಮತ್ತು ನಿರ್ಲಕ್ಷ್ಯಕ್ಕೊಳಗಾದ ಕಾಯಿಲೆಗಳನ್ನು ನಿಯಂತ್ರಿಸಲು ಹೊಸ, ಸುಧಾರಿತ ಮತ್ತು ನವೀನ ಜೈವಿಕ ವೈದ್ಯಕೀಯ ಸಾಧನಗಳು ಮತ್ತು ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಕುರಿತ ಒಪ್ಪಂದಕ್ಕೆ ಅನುಮೋದನೆ ನೀಡಿದೆ.* ಪರಸ್ಪರ ಹಿತಾಸಕ್ತಿಯ ಅಂತಾರಾಷ್ಟ್ರೀಯ ವೈಜ್ಞಾನಿಕ ಮತ್ತು ತಾಂತ್ರಿಕ ಸಹಕಾರ ಸಂಬಂಧದ ಚೌಕಟ್ಟಿನೊಳಗೆ ಭಾರತ-ಅಮೆರಿಕ ನಡುವಿನ ಸಂಬಂಧ ಮತ್ತಷ್ಟು ಬಲವರ್ಧನೆಯಾಗಲಿದೆ.