Job Description: * ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.* ಬಿಎಸ್ ಪಾಟೀಲ್‌ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿದ್ದ ಶಿಫಾರಸಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಇಂದು ಸಹಿ ಹಾಕಿದ್ದಾರೆ.* ಬಿ ಎಸ್ ಪಾಟೀಲ್‌ ಅವರು ಗುರುವಾರ ಬೆಳಗ್ಗೆ ರಾಜಭವನದಲ್ಲಿ ನೂತನ ಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.* ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು 2022 ರ ಜನವರಿ 27 ರಂದು ನಿವೃತ್ತರಾಗಿದ್ದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು. ಈ ಹುದ್ದೆಗೆ ಈಗ ಬಿ.ಎಸ್‌. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಬಿ ಎಸ್ ಪಾಟೀಲ್ ಅವರು 2019 ರ ನವೆಂಬರ್‌ನಿಂದ ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.* ಇದೆ ಸಂದರ್ಭದಲ್ಲಿ ಬೊಮ್ಮಾಯಿ ಅವರು ರಾಜ್ಯಪಾಲರು ನೇಮಕಾತಿ ಆದೇಶ ಹೊರಡಿಸಿದ್ದಾರೆ.