Job Description: * ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 17 ಮತ್ತು 18 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಜೂನ್ 18 ರಂದು ಪಾವಗಡ್ ಬೆಟ್ಟದಲ್ಲಿರುವ ಶ್ರೀ ಕಾಳಿಕಾ ಮಾತೆಯ ಜೀರಣೋದ್ದಾರವಾದ ದೇವಸ್ಥಾನಕ್ಕೆ ಪ್ರಧಾನಮಂತ್ರಿಯವರು ಭೇಟಿ ನೀಡಿ ಉದ್ಘಾಟನೆ ಮಾಡಲಿದ್ದಾರೆ. * ಪ್ರದಾನಮಂತ್ರಿ ಅವರು ವಡೋದರಾದಲ್ಲಿ ಗುಜರಾತ್ ಗೌರವ್ ಅಭಿಯಾನದಲ್ಲಿ 21,000 ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.* ಪ್ರಧಾನಿಯವರು 16,000 ಕೋಟಿ ರೂ.ಗಳ ವಿವಿಧ ರೈಲ್ವೆ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇವುಗಳಲ್ಲಿ 357 ಕಿಮೀ ಉದ್ದದ ಹೊಸ ಪಾಲನ್‌ಪುರ್‌ನ - ಮೀಸಲಾದ ಸರಕು ಸಾಗಣೆ ಕಾರಿಡಾರ್‌ನ ಮಾದರ್ ವಿಭಾಗ; 166 ಕಿಮೀ ಉದ್ದದ ಅಹಮದಾಬಾದ್-ಬೋಟಾಡ್ ವಿಭಾಗದ ಗೇಜ್ ಪರಿವರ್ತನೆ; 81 ಕಿಮೀ ಉದ್ದದ ಪಾಲನ್‌ಪುರದ ವಿದ್ಯುದೀಕರಣ - ಮಿತಾ ವಿಭಾಗ ಸೇರಿವೆ. * ರೈಲ್ವೇ ವಲಯದಲ್ಲಿ ಇತರ ಉಪಕ್ರಮಗಳ ಶಿಲಾನ್ಯಾಸದೊಂದಿಗೆ ಸೂರತ್, ಉದ್ನಾ, ಸೋಮನಾಥ್ ಮತ್ತು ಸಬರಮತಿ ನಿಲ್ದಾಣಗಳ ಪುನರಾಭಿವೃದ್ಧಿಯ ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಲಿದ್ದಾರೆ.* ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ, ನಗರ ಪ್ರದೇಶದಲ್ಲಿ ಸುಮಾರು 1,800 ಕೋಟಿ ರೂಪಾಯಿ ಮೌಲ್ಯದ ಮನೆಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ 1,530 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಮನೆಗಳು ಸೇರಿದಂತೆ ಒಟ್ಟು 1.38 ಲಕ್ಷ ಮನೆಗಳನ್ನು ಪ್ರಧಾನ ಮಂತ್ರಿಯವರು ಲೋಕಾರ್ಪಣೆ ಮಾಡಲಿದ್ದಾರೆ. ಇದರೊಂದಿಗೆ ಸುಮಾರು 310 ಕೋಟಿ ರೂಪಾಯಿ ಮೌಲ್ಯದ ಸುಮಾರು 3000 ಮನೆಗಳ ಖಟ್ ಮುಹೂರ್ತ ಕೂಡ ನಡೆಯಲಿದೆ.* ಖೇಡಾ, ಆನಂದ್, ವಡೋದರಾ, ಛೋಟಾ ಉದೇಪುರ್ ಮತ್ತು ಪಂಚಮಹಲ್‌ನಲ್ಲಿ 680 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಧಾನ ಮಂತ್ರಿಯವರು ಲೋಕಾರ್ಪಣೆ ಮಾಡಲಿದ್ದಾರೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.* ಪ್ರಧಾನ ಮಂತ್ರಿ ಅವರು ‘ಮುಖ್ಯಮಂತ್ರಿ ಮಾತೃಶಕ್ತಿ ಯೋಜನೆ’ಗೆ ಚಾಲನೆ ನೀಡಲಿದ್ದು, ಇದು 800 ಕೋಟಿ ರೂ. ಯೋಜನೆಯಡಿ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ಪ್ರತಿ ತಿಂಗಳು ಅಂಗನವಾಡಿ ಕೇಂದ್ರಗಳಿಂದ 2 ಕೆಜಿ ಕಡಲೆ, 1 ಕೆಜಿ ತೊಗರಿಬೇಳೆ ಮತ್ತು 1 ಕೆಜಿ ಖಾದ್ಯ ಎಣ್ಣೆಯನ್ನು ಉಚಿತವಾಗಿ ನೀಡಲಾಗುತ್ತದೆ. * ಪ್ರಧಾನ ಮಂತ್ರಿಗಳು ಸುಮಾರು 120 ಕೋಟಿ ರೂಪಾಯಿಗಳನ್ನು ‘ಪೋಷಣ್ ಸುಧಾ ಯೋಜನೆ’ಗೆ ವಿತರಿಸಲಿದ್ದಾರೆ, ಇದನ್ನು ಈಗ ರಾಜ್ಯದ ಎಲ್ಲಾ ಬುಡಕಟ್ಟು ಫಲಾನುಭವಿಗಳಿಗೆ ವಿಸ್ತರಿಸಲಾಗಿದೆ.* ಪಾವಗಡ್ ಬೆಟ್ಟದಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ಕಾಳಿಕಾ ಮಾತೆಯ ದೇವಾಲಯವನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ