Job Description: * ಜೂನ್ 21 ಅಂತರ ರಾಷ್ಟ್ರೀಯ ಯೋಗ ದಿನಾಚರಣೆ, ಜೂನ್ 21 ಬೆಳಿಗ್ಗೆ 6 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೈಸೂರಿಗೆ ಅಂಬಾವಿಲಾಸ ಅರಮನೆ ಆವರಣದಲ್ಲಿ ನಡೆಯುವ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.* ಸುಮಾರು 15 ಸಾವಿರ ಮಂದಿ ಯೋಗಪಟುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.* ಜೂನ್ 21 ರಂದು 1 500 ಕೋಟಿ ವೆಚ್ಚದ ರೈಲ್ವೆ ಯೋಜನೆಯೊಂದನ್ನು ಉದ್ಘಾಟಿಸಲಿದ್ದಾರೆ.* ಸುತ್ತೂರು ಮಠಕ್ಕೂ ಭೇಟಿ ನೀಡಿ , ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿದ್ದಾರೆ . ಅಲ್ಲಿ ಸಂಸ್ಕೃತ ಪಾಠಶಾಲೆ ಉದ್ಘಾಟಿಸಲಿದ್ದಾರೆ.* ವಸ್ತುಪ್ರದರ್ಶನ ವೀಕ್ಷಿಸಲಿದ್ದಾರೆ . ಅಲ್ಲದೇ , ರಾಜ್ಯದ ಹಲವು ಐತಿಹಾಸಿಕ ಸ್ಥಳಗಳಲ್ಲೂ ಕೇಂದ್ರದ ಸಚಿವರು ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.* ಹಳೇಬೀಡಿನಲ್ಲಿ ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ , ಹಂಪಿಯಲ್ಲಿ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಶಿ , ಪಟ್ಟದಕಲ್ಲಿನಲ್ಲಿ ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ವಿಜಯಪುರದ ಗೋಲ್ ಗುಂಬಜ್‌ನಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಸಚಿವ ಭಗವಂತ ಖೂಬಾ ಅವರು ಪಾಲ್ಗೊಳ್ಳುವರು* ಮೋದಿಯವರು ನೇತೃತ್ವದಲ್ಲಿ ಒಟ್ಟು 75 ಸ್ಥಳಗಳಲ್ಲಿ ಯೋಗ ದಿನಾಚರಣೆ ನಡೆಯಲಿದೆ.* ಜೂನ್ 20 ರ ಸಂಜೆ 5 ಕ್ಕೆ ಮೈಸೂರು ವಿಮಾನನಿಲ್ದಾಣಕ್ಕೆ ಪ್ರಧಾನಿ ಬರಲಿದ್ದಾರೆ . ಅಲ್ಲಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ' ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ' ಸಮಾರಂಭದಲ್ಲಿ ಭಾಗವಹಿಸಿ , ಭಾಷಣ ಮಾಡಲಿದ್ದಾರೆ* ಆಯುಷ್‌ನಲ್ಲಿ ಕೇಂದ್ರದ ಅನುದಾನ 1 150 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಉತ್ಕೃಷ್ಟ ಕೇಂದ್ರವನ್ನು ಅದೇ ವೇದಿಕೆಯಲ್ಲಿ ಉದ್ಘಾಟಿಸಲಿದ್ದಾರೆ.