Job Description: * ವಡೋದರಾದಲ್ಲಿ ಗುಜರಾತ್‌ ಗೌರವ್‌ ಅಭಿಯಾನದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ 21,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು * ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ 1.4 ಲಕ್ಷ ಕ್ಕೂ ಹೆಚ್ಚು ಮನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು * 16,000 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಯೋಜನೆಗಳ ಮೂಲಕ ಈ ಪ್ರದೇಶದಲ್ಲಿ ರೈಲ್ವೆ ಸಂಪರ್ಕಕ್ಕೆ ಪ್ರಮುಖ ಉತ್ತೇಜನ* 800 ಕೋಟಿ ರೂ.ಗಳ ವೆಚ್ಚದಲ್ಲಿ‘ಮುಖ್ಯಮಂತ್ರಿ ಮಾತೃಶಕ್ತಿ ಯೋಜನೆ’ಗೆ ಚಾಲನೆ* 21 ನೇ ಶತಮಾನದ ಭಾರತದ ತ್ವರಿತ ಅಭಿವೃದ್ಧಿಗೆ ಮಹಿಳೆಯರ ತ್ವರಿತ ಅಭಿವೃದ್ಧಿ, ಅವರ ಸಬಲೀಕರಣ ಅಷ್ಟೇ ಮುಖ್ಯವಾಗಿದೆ. ಇಂದು ಭಾರತವು ಮಹಿಳೆಯರ ಅಗತ್ಯಗಳು ಮತ್ತು ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುತ್ತಿದೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಸಭೆಯಲ್ಲಿಅನೇಕ ಪರಿಚಿತ ಮುಖಗಳನ್ನು ಗುರುತಿಸುತ್ತಾ ಹೇಳಿದರು.