Job Description: * 2015 ಜೂನ್ 21 ರಂದು ಮೊದಲ ಬಾರಿಗೆ ಜಾರಿಗೆ ಬಂದಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವಾದ್ಯಂತ ಪ್ರತಿವರ್ಷ ಜೂನ್ 21 ರಂದು ಆಚರಿಸಲಾಗುತ್ತದೆ. * ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ.* ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಪ್ರತಿವರ್ಷ ಯೊಗದ ದಿನಾಚರಣೆಯು ಯೋಗ, ಧ್ಯಾನ, ಸಭೆಗಳು ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ. * ಯೋಗ ದಿನಾಚರಣೆ ಆಚರಣೆ ಬಗ್ಗೆ 2014 ಸೆಪ್ಟೆಂಬರ್‌ನಲ್ಲಿ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ಪ್ರಸ್ತಾಪವನ್ನು ಮಂಡಿಸಿದ್ದರು.* ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಅನುಮೋದನೆಯನ್ನು ನೀಡಿದ್ದವು.* 2015 ಜೂನ್ 21 ರಂದು ಚೊಚ್ಚಲ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಆಯುಶ್ ಸಚಿವಾಲಯದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ರಾಜಪಥದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.* ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಹಾಯ ಮಾಡುತ್ತದೆ.