Job Description: * ಹಿರಿಯ ರಾಜತಾಂತ್ರಿಕ ಅಧಿಕಾರಿ ರುಚಿರಾ ಕಾಂಬೋಜ್ ಅವರನ್ನು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿಯಾಗಿ ಮಂಗಳವಾರ ನೇಮಕ ಮಾಡಲಾಗಿದೆ. * ಭಾರತೀಯ ವಿದೇಶಾಂಗ ಸೇವೆಯ (ಐಎಫ್ಎಸ್‌) 1987 ರ ಬ್ಯಾಚ್‌ನ ಅಧಿಕಾರಿಯಾಗಿರುವ ರುಚಿರಾ ಅವರು ಪ್ರಸ್ತುತ ಭೂತಾನ್‌ನಲ್ಲಿ ಭಾರತೀಯ ರಾಯಭಾರಿಯಾಗಿದ್ದಾರೆ.* ರುಚಿರಾ ಅವರು ಶೀಘ್ರ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಅವರು ಟಿ ಎಸ್ ತಿರುಮೂರ್ತಿ ಅವರ ನಂತರ ವಿಶ್ವಸಂಸ್ಥೆಯ ಭಾರತೀಯ ರಾಯಭಾರಿಯಾಗಲಿದ್ದಾರೆ.