Job Description: * ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬುಧವಾರ ಸಂಜೆ ತಮ್ಮ ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಯನ್ನು ನೀಡಿದರು ಹಾಗು ತಮ್ಮ ರಾಜ್ಯ ವಿಧಾನ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.* ಸುಪ್ರೀಂ ಕೋರ್ಟ್ ವಿಶ್ವಾಸ ಮತ ಸಾಬೀತುಪಡಿಸಿ ಎಂಬ ಸೂಚನೆಯ ಬೆನ್ನಲೇ ಈ ನಿರ್ಧಾರವನ್ನು ಕೈಗೊಂಡರು.* ಬಿಜೆಪಿಯ ನಾಯಕ ದೇವೇಂದ್ರ ಫಡ್ನವಿಸ್ ರವರು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಯವರಿಗೆ ಮಹಾರಾಷ್ಟ್ರ ಸರ್ಕಾರಕ್ಕೆ ವಿಶ್ವಾಸ ಮತ ಸಾಬೀತುಪಡಿಸಲು ತಿಳಿಸಿ ಎಂದು ಮನವಿ ಮಾಡಿಕೊಂಡರು.* ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಗಳಾದ ಸೂರ್ಯಕಾಂತ ಮತ್ತು ಜೆಬಿ, ಪರ್ದಿವಾಲಾ ಅವರ ಪೀಠವು ಬುಧವಾರ ಈ ಅರ್ಜಿಯ ವಿಚಾರಣೆಯನ್ನು ಮಾಡಿತ್ತು.* ಬುಧವಾರ ಸಂಜೆ 5 ರಿಂದ ರಾತ್ರಿ 8,30 ರವರೆಗೆ ವಿಚಾರಣೆ ಯನ್ನು ಸುಪ್ರೀಂಕೋರ್ಟ್‌ ನಡೆಸಿತು ಹಾಗು 9 ಗಂಟೆಗೆ ಆದೇಶವನ್ನು ನೀಡಿತ್ತು.* ಫೇಸ್‌ಬುಕ್ ಲೈವ್‌ನಲ್ಲಿ ರಾತ್ರಿ 9.30 ಕ್ಕೆ ಮಾಧ್ಯಮಗೋಷ್ಠಿ ನಡೆಸಿ ರಾಜೀನಾಮೆ ಯನ್ನು ಸಲ್ಲಿಸಿದರು.* ರಾಜೀನಾಮೆ ಘೋಷಿಸಿದ ನಂತರ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಧನ್ಯವಾದ ತಿಳಿಸಿದರು.