Job Description: * ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಗುಜರಾತ್,ಮಹಾರಾಷ್ಟ್ರ,ಗೋವಾ , ಕರ್ನಾಟಕ , ಕೇರಳ , ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಪ್ರದೇಶದ 56,825 ಚದರ ಕಿ.ಮೀ ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಮತ್ತೊಮ್ಮೆ ಕರಡು ಅಧಿಸೂಚನೆಯನ್ನು ಹೊರಡಿಸಿದೆ.* ಈ ಪ್ರದೇಶಕ್ಕೆ ಯುನೆಸ್ಕೊ ವಿಶ್ವಪಾರಂಪರಿಕ ತಾಣಗಳ ಮಾನ್ಯತೆ ದೊರೆಯುವುದು ಅಳುವಿನ ಅಂಚಿನಲ್ಲಿರುವ ಅಪರೂಪದ ಸಸ್ಯ ಮತ್ತು ಪ್ರಾಣಿ ಸಂಕುಲ ಮತ್ತು ನದಿ ಮೂಲಗಳನ್ನು ಹೊಂದಿರುವ ಪಶ್ಚಿಮ ಘಟ್ಟದ ಕೆಲ ಪ್ರದೇಶ ಗಳನ್ನೂ ಪರಿಸರದ ಸೂಕ್ಷ್ಮ ಪ್ರದೇಶವೆಂದು ಘೋಷಿಸಿದರೆ ಅಷ್ಟೇ ಈ ಮಾನ್ಯತೆ ದೊರಕುತ್ತದೆ.* ಈ ನಿಟ್ಟಿನಲ್ಲಿ ಕೇಂದ್ರದ ಪ್ರಯತ್ನ ಸಾಗಿದೆ ಆದ್ರೆ ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯಗಳು ವಿರೋಧ ವನ್ನು ವ್ಯಕ್ತ ಪಡಿಸುತ್ತಿವೆ ಆದ್ರೆ ಕೇಂದ್ರ ಸರ್ಕಾರವು ಜುಲೈ 6 ರಂದು ಅಧಿಸೂಚನೆಯನ್ನು ಹೊರಡಿಸಿದೆ.* 1986 ರ ಪರಿಸರ ಸಂರಕ್ಷಣಾ ಕಾಯ್ದೆಯಡಿ ಈ ಅಧಿಸೂಚನೆಯನ್ನು ಹೊರಡಿಸಿದ್ದಾರೆ ಮತ್ತು ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಲಾಗಿದೆ.* ಕೇಂದ್ರ ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ಸಮಿತಿಯು 2013 ರಲ್ಲಿ ಪಶ್ಚಿಮ ಜೀವ ವೈವಿಧ್ಯ ಉಳಿಸಲು ಘಟ್ಟದ 59,940 ಚ.ಕಿ. ಮೀ ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಸಂರಕ್ಷಿಸಬೇಕು ಎಂದು ತಿಳಿಸಿತ್ತು.* ಕೆಲ ಬಗೆಯ ಚಟುವಟಿಕೆಗಳನ್ನು ಈ ಭಾಗದಲ್ಲಿ ನಿಷೇಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.