Job Description: * ಪ್ರಧಾನಿ ದಿಯೋಘರ್‌ನಲ್ಲಿ 16,800 ಕೋಟಿ ರೂ.ಗಿಂತ ಹೆಚ್ಚಿನ ವೆಚ್ಚದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ * ಈ ಯೋಜನೆಯು "ಒಂದು ಸಮಗ್ರ ವಿಧಾನವು ಯೋಜನೆಗಳಿಗೆ ಮಾರ್ಗದರ್ಶನ ನೀಡಿದಾಗ, ಸಮಾಜದ ವಿವಿಧ ವಲಯಗಳಿಗೆ ಆದಾಯದ ಹೊಸ ಮಾರ್ಗಗಳು ಸೃಷ್ಟಿಯಾಗುತ್ತವೆ"* ದಿಯೋಘರ್ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ಪ್ರಧಾನಿ; ಇದು ಬಾಬಾ ಬೈದ್ಯನಾಥ ಧಾಮಕ್ಕೆ ನೇರ ವಿಮಾನ ಸಂಪರ್ಕ ಕಲ್ಪಿಸಲಿದೆ. ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆ(ಎಐಐಎಂಎಸ್)ಯಲ್ಲಿ ಒಳರೋಗಿಗಳ ವಿಭಾಗ ಮತ್ತು ಶಸ್ತ್ರಚಿಕಿತ್ಸಾ ಸೌಲಭ್ಯ ಲೋಕಾರ್ಪಣೆ ಮಾಡಿದ ಪ್ರಧಾನಿ* "ಕೊರತೆಗಳನ್ನು ಅವಕಾಶಗಳಾಗಿ ಪರಿವರ್ತಿಸಲು ನಾವು ಅನೇಕ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದೇವೆ". "ಸಾಮಾನ್ಯ ನಾಗರಿಕರ ಜೀವನವನ್ನು ಸುಲಭಗೊಳಿಸಲು ಕ್ರಮಗಳನ್ನು ತೆಗೆದುಕೊಂಡಾಗ, ರಾಷ್ಟ್ರೀಯ ಸ್ವತ್ತುಗಳು ಸೃಜನೆಯಾಗುತ್ತವೆ, ಜತೆಗೆ ರಾಷ್ಟ್ರೀಯ ಅಭಿವೃದ್ಧಿಯ ಹೊಸ ಅವಕಾಶಗಳು ಹೊರಹೊಮ್ಮುತ್ತವೆ"* ಜಾರ್ಖಂಡ್ ರಾಜ್ಯಪಾಲ ಶ್ರೀ ರಮೇಶ್ ಬೈಸ್, ಮುಖ್ಯಮಂತ್ರಿ ಶ್ರೀ ಹೇಮಂತ್ ಸೊರೆನ್, ಕೇಂದ್ರ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ರಾಜ್ಯ ಸಚಿವರು ಮತ್ತು ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.* ‘ರಾಜ್ಯಗಳ ಅಭಿವೃದ್ಧಿಯಿಂದ ರಾಷ್ಟ್ರದ ಅಭಿವೃದ್ಧಿ’ ಎಂಬ ಚಿಂತನೆಯೊಂದಿಗೆ ದೇಶವು ಕಳೆದ 8 ವರ್ಷಗಳಿಂದ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ತಿಳಿಸಿದರು. ಕಳೆದ 8 ವರ್ಷಗಳಲ್ಲಿ ಹೆದ್ದಾರಿಗಳು, ರೈಲು ಮಾರ್ಗಗಳು,, ವಾಯು ಮಾರ್ಗಗಳು, ಜಲಮಾರ್ಗಗಳ ಮೂಲಕ ಜಾರ್ಖಂಡ್ ಅನ್ನು ಸಂಪರ್ಕಿಸುವ ನಮ್ಮ ಪ್ರಯತ್ನಗಳ ಹಾದಿಯಲ್ಲಿ ಅದೇ ಚಿಂತನೆ ಮತ್ತು ಮನೋಭಾವ ಮುಂದುವರೆದಿದೆ, ಅದು ಅತಿಮುಖ್ಯವೂ ಆಗಿದೆ.* ಜಾರ್ಖಂಡ್ ನಲ್ಲಿ ಇದು 2 ನೇ ವಿಮಾನ ನಿಲ್ದಾಣ ವಾಗಿದೆ. ಉಡಾನ್ ಯೋಜನೆಯ ಮೂಲಕ ಸಾಮಾನ್ಯ ಜನರಿಗೆ ವಿಮಾನ ಪ್ರಯಾಣವನ್ನು ಕೈಗೆಟುಕುವಂತೆ ಮಾಡಿರುವ ಸಂದರ್ಭದಲ್ಲಿ, ಸರ್ಕಾರದ ಪ್ರಯತ್ನಗಳ ಪ್ರಯೋಜನಗಳು ದೇಶಕ್ಕೆ ಅಚ್ಚರಿ ಮೂಡಿಸಿವೆ. ಉಡಾನ್ ಯೋಜನೆಯಡಿ ಕಳೆದ 5-6 ವರ್ಷಗಳಲ್ಲಿ ವಿಮಾನ ನಿಲ್ದಾಣಗಳು, ಹೆಲಿಪೋರ್ಟ್‌ಗಳು ಮತ್ತು ವಾಟರ್ ಏರೋಡ್ರೋಮ್‌ಗಳ ಮೂಲಕ ಸುಮಾರು 70 ಹೊಸ ಸ್ಥಳಗಳನ್ನು ಸೇರಿಸಲಾಗಿದೆ. ಇಂದು ಸಾಮಾನ್ಯ ನಾಗರಿಕರು 400 ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ವಿಮಾನ ಪ್ರಯಾಣದ ಸೌಲಭ್ಯ ಪಡೆಯುತ್ತಿದ್ದಾರೆ.* ಗೇಲ್(ಜಿಎಐಎಲ್)ನ ಜಗದೀಶ್‌ಪುರ-ಹಲ್ದಿಯಾ-ಬೊಕಾರೊ-ಧಮ್ರಾ ಪೈಪ್‌ಲೈನ್‌ನ ಬೊಕಾರೊ-ಅಂಗುಲ್ ವಿಭಾಗವು ಜಾರ್ಖಂಡ್ ಮತ್ತು ಒಡಿಶಾದ 11 ಜಿಲ್ಲೆಗಳಲ್ಲಿ ನಗರ ಅನಿಲ ವಿತರಣಾ ಜಾಲವನ್ನು ವಿಸ್ತರಿಸಲಿದೆ.* ದುರ್ಗಮ ಮತ್ತು ದೂರದ ಪ್ರದೇಶಗಳಲ್ಲಿರುವ 18,000 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ. ನಲ್ಲಿ ನೀರು, ರಸ್ತೆಗಳು ಮತ್ತು ಗ್ಯಾಸ್ ಸಂಪರ್ಕವನ್ನು ತರಲು ಸರ್ಕಾರವು ಕಳೆದ 8 ವರ್ಷಗಳಲ್ಲಿ ಕಾರ್ಯಾಚರಣೆ ಮಾದರಿಯಲ್ಲಿ (ಮಿಷನ್ ಮೋಡ್‌) ಕೆಲಸ ಮಾಡಿದೆ ಎಂದು ಅವರು ಹೇಳಿದರು. * ಪ್ರಧಾನಿಯವರು 3 ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. 3,000 ಕೋಟಿ ರೂ. ವೆಚ್ಚದ ವಿವಿಧ ಇಂಧನ ಮೂಲಸೌಕರ್ಯ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. * 10,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಬಹುರಸ್ತೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ಅವರು ನೆರವೇರಿಸಿದರು.