Job Description: * ಕಾಶಿಗೆ ಹೆಚ್ಚಿನ ಭಕ್ತರು ಸಂದರ್ಶಿಸಲಿ ಎನ್ನುವ ಉದ್ದೇಶದಿಂದ ಸಹಾಯಧನ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ಅಭಿವೃದ್ದಿಗೊಂಡು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.* ಕಾಶಿ ಯಾತ್ರೆಗೆ ಹೊರಟಿರುವಂತ ಯಾತ್ರಾರ್ಥಿಗಳಿಗೆ ರೂ.5,000 ಸಹಾಯಧನವನ್ನು ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಸಿದ್ದಾರೆ* ಏಪ್ರಿಲ್‌ 1, 2022 ರಿಂದ ಜುಲೈ 20, 2022 ರ ವರೆಗೆ ಕಾಶಿ ಯಾತ್ರೆಯನ್ನು ಕೈಗೊಂಡಿರುವ ಜನರು ಆಫ್‌ಲೈನ್‌ ಅರ್ಜಿಗಳನ್ನು ಮುಜರಾಯಿ ಆಯುಕ್ತರ ಕಚೇರಿಗೆ ಸಲ್ಲಿಸುವ ಮೂಲಕ ಸಹಾಯಧನ ಪಡೆದುಕೊಳ್ಳಬಹುದಾಗಿದೆ. * ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಾಂಕೇತಿಕವಾಗಿ ಸಹಾಯಧನ ವಿತರಿಸಿ, ಡಿ.ಬಿ.ಟಿ ಮೂಲಕ ಆನ್‌ಲೈನ್‌ ಮೂಲಕ ಹಣ ವರ್ಗಾವಣೆಗೆ ಚಾಲನೆ ನೀಡಿಹಾಗೂ ಆನ್‌ಲೈನ್‌ ಮೂಲಕ ಅರ್ಜಿಸಲ್ಲಿಸುವ ವೆಬ್‌ ಪೋರ್ಟಲ್‌ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಇತ್ತೀಚೆಗೆ ಕಾಶಿಯನ್ನು ಮೋದಿಯವರು ನವೀಕರಣ ಮಾಡಿದ್ದಾರೆ.* 23 ಘಾಟ್ ಗಳನ್ನು ಸ್ವಚ್ಚಗೊಳಿಸಿ ಬದಲಾವಣೆ ಮಾಡಲಾಗಿದೆ. ಹಿಂದೆ ಕಾಶಿಗೆ ಹೋದರೆ ಅಲ್ಲಿನ ಅವ್ಯವಸ್ಥೆಯಿಂದ ಬೇಸರ ಉಂಟಾಗುತ್ತಿತ್ತು ಈ ಬದಲಾವಣೆ ಇಂದಾಗಿ ಇದಾವುದೂ ಆಗುವುದಿಲ್ಲ.* ದಿವ್ಯ ಕಾಶಿ – ಭವ್ಯ ಕಾಶಿಯಾಗಿ ಅನಾವರಣಗೊಂಡಿರುವ ಕಾಶಿಯನ್ನ ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂದರ್ಶಿಸಲಿ ಎನ್ನುವ ಉದ್ದೇಶದಿಂದ ಸಹಾಯಧನ ಯೋಜನೆಯನ್ನು ಪ್ರಾರಂಭಿಸಲಾಗಿದೆ.* ಮುಜರಾಯಿ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅವರ ಆಸಕ್ತಿಯ ಈ ಯೋಜನೆಯನ್ನ ಸರಳಗೊಳಿಸುವ ಮೂಲಕ ಯಾತ್ರಾರ್ಥಿಗಳು ಸುಲಭವಾಗಿ ಸಹಾಯಧನ ಪಡೆದುಕೊಳ್ಳುವುದಕ್ಕೆ ಅನುವು ಮಾಡಿಕೊಡುವ ವೆಬ್‌ಪೋರ್ಟಲ್‌ನ್ನು ಸೇವಾಸಿಂಧು ವೆಬ್‌ಪೋರ್ಟ್‌ಲ್‌ನಲ್ಲಿ ಸಿದ್ದಪಡಿಸಲಾಗಿದೆ.* ಯಾತ್ರಾರ್ಥಿಗಳು ಕಾಶಿಗೆ ಭೇಟಿ ನೀಡಿದ ಸಂಧರ್ಭದಲ್ಲಿ ಅಲ್ಲಿನ ಕರ್ನಾಟಕ ಛತ್ರದಲ್ಲಿ ತಮ್ಮ ನೊಂದಣಿ ಮಾಡಿಸಿಕೊಂಡು ಅಗತ್ಯ ದಾಖಲಾತಿಗಳನ್ನು ವೆಬ್‌ಪೋರ್ಟ್‌ಲ್‌ ಮೂಲಕ ಸಲ್ಲಿಸಬಹುದು ಬಸವರಾಜವರು ಹೇಳಿದರು.* ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಜರಾಯಿ ಇಲಾಖೆಗೆ ಬಹಳಷ್ಟು ಸಹಕಾರ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ದೇವಾಲಯಗಳ ಸಮಗ್ರ ಅಭಿವೃದ್ದಿಯ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ಹೆಚ್ಚಿನ ಬಲ ತುಂಬಿದ್ದಾರೆ.* ಪ್ರಸಕ್ತ ಆರ್ಥಿಕ ವರ್ಷದಲ್ಲಿ 10 ವರ್ಷಗಳಿಗೆ ಹೋಲಿಸಿದಲ್ಲಿ 693 ಕೋಟಿ ರೂಪಾಯಿಗಳಷ್ಟು ಬೃಹತ್‌ ಅನುದಾನ ನೀಡಿದ್ದಾರೆ* ಜೀವನದಲ್ಲಿ ಒಮ್ಮೆಯಾದರೂ ಕಾಶಿಗೆ ಭೇಟಿ ಮಾಡಬೇಕು ಎನ್ನುವುದು ಬಹಳಷ್ಟು ಜನರ ಅಭಿಲಾಷೆಯಾಗಿರುತ್ತದೆ. ಅದಕ್ಕೆ ಪ್ರೋತ್ಸಾಹ ಧನ ನೀಡಬೇಕು ಎನ್ನುವುದು ನನ್ನ ಬಹಳದಿನದ ಆಶಯವಾಗಿತ್ತು. ಇದಕ್ಕೆ ಸೂಕ್ತವಾಗಿ ಮುಖ್ಯಮಂತ್ರಿಗಳು ಸ್ಪಂದಿಸಿದರು.* ಸೂಕ್ತ ಅನುದಾನವನ್ನೂ ಒದಗಿಸಿದ್ದಾರೆ. ಹಾಗೆಯೇ, ಭಾರತ್‌ ಗೌರವ್‌ ಯೋಜನೆ ಪ್ರಾರಂಭಕ್ಕೂ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಶಶಿಕಲಾ ಹೇಳಿದರು * 500 ಕ್ಕೂ ಹೆಚ್ಚು ಆಫ್‌ಲೈನ್‌ ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನು ಮುಂದೆ ಕಾಶಿ ಯಾತ್ರೆಯನ್ನು ಕೈಗೊಂಡು ಸರ್ಕಾರದ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಯಾತ್ರಾರ್ಥಿಗಳು ಸರ್ಕಾರದ ಮಾರ್ಗಸೂಚಿಯ ಅನ್ವಯ ಸಂಬಂಧಿಸಿದ ದಾಖಲಾತಿಗಳನ್ನು ಇಲಾಖೆಯ ವೆಬ್‌ಸೈಟ್‌ https://itms.kar.nic.in/ ಮತ್ತು ಸೇವಾ ಸಿಂಧು ಮೂಲಕ ವೆಬ್‌ ಪೊರ್ಟ್‌ಲ್‌ನಲ್ಲಿ (https://sevasindhu.karnataka.gov.in/) ಅಪ್‌ಲೋಡ್‌ ಮಾಡಬೇಕು. * ಅಪ್‌ಲೋಡ್‌ ಮಾಡಲಾದ ದಾಖಲೆಗಳನ್ನು ಪರಿಶೀಲಿಸಿ ಅರ್ಜಿದಾರರ ಆಧಾರ್‌ ಲಿಂಕ್‌ ಹೊಂದಿರತಕ್ಕಂತಹ ಬ್ಯಾಂಕ್‌ ಖಾತೆಗೆ ರೂ. 5,000 ಗಳ ಸಹಾಯಧನವನ್ನು ನೇರವಾಗಿ ಡಿ.ಬಿ.ಟಿ ಮೂಲಕ ಜಮಾ ಮಾಡಲಾಗುವುದು ಎಂದು ಮಾಹಿತಿ ನೀಡಿದರು.* ಇತ್ತೀಚೆಗೆ ಕಾಶಿಯಾತ್ರೆಗೆ ತೆರಳಿದ್ದ 10 ಜನ ಯಾತ್ರಾರ್ಥಿಗಳಿಗೆ ಸಾಂಕೇತಿಕವಾಗಿ ಸಹಾಯಧನ ವಿತರಿಸಲಾಯಿತು.