Job Description: * ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ‘ಎ’ ಮತ್ತು ‘ಬಿ’ ಪ್ರವರ್ಗದಡಿ ಬರುವ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಶೇ.33ರಷ್ಟು ಮೀಸಲಾತಿ ನೀಡುವುದು ಸೂಕ್ತ ಎಂದು ನ್ಯಾಯಮೂರ್ತಿ ಭಕ್ತವತ್ಸಲ ಅವರ ನೇತೃತ್ವದ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಶಿಫಾರಸು ಮಾಡಿದೆ.* ಸ್ವತಂತ್ರ ಆಯೋಗ ರಚಿಸಿ ವರದಿ ಪಡೆಯಬೇಕು ಎಂದು ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಇದು ಎಲ್ಲ ರಾಜ್ಯಗಳಿಗೂ ಅನ್ವಯಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ಸಂಬಂಧ ಆಯೋಗ ರಚಿಸಲು ನಿರ್ಧರಿಸಿತ್ತು.* ಈ ಆಯೋಗವನ್ನು ಮೇ 7 ರಂದು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಲಾಗಿತ್ತು.* ಹಿಂದುಳಿದ ವರ್ಗಗಳಿಗೆ ಶೇ.33 ರಷ್ಟು ರಾಜಕೀಯ ಮೀಸಲಾತಿ ಮುಂದುವರೆಸುವುದರೊಂದಿಗೆ ಒಬಿಸಿ ಮತ್ತು ಎಸ್ಸಿ-ಎಸ್ಟಿ ಸಮುದಾಯಗಳಿಗೆ ನೀಡುವ ಮೀಸಲಾತಿ ಪ್ರಮಾಣ ಶೇ.50ರಷ್ಟು ಮೀರಬಾರದು ಎಂದು ಆಯೋಗ ತಿಳಿಸಿದೆ* ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗ ಮೀಸಲಾತಿ ಉದ್ದೇಶಕ್ಕಾಗಿ ಪಟ್ಟಿಮಾಡಿರುವ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.44 ರಷ್ಟಿರುವ ಒಬಿಸಿಯವರಿಗೂ ರಾಜಕೀಯ ಮೀಸಲಾತಿಗೆ ಪರಿಗಣಿಸಬೇಕು. ರಾಜಕೀಯ ಮತ್ತು ಸಾಮಾಜಿಕವಾಗಿ ಹಿಂದುಳಿದಿರುವ ಆಧಾರದ ಮೇಲೆ ರಾಜಕೀಯ ಮೀಸಲಾತಿಗೆ ಪರಿಗಣಿಸಬೇಕು ಎಂದು ವರದಿ ಹೇಳಿದೆ* ಬಿಬಿಎಂಪಿ ಕಾಯ್ದೆ 2020 ರ ಸೆಕ್ಷನ್‌ 57 ರ ಪ್ರಕಾರ ಮೇಯರ್‌ ಮತ್ತು ಉಪ ಮೇಯರ್‌ ಅವರ ಅಧಿಕಾರಾವಧಿಯನ್ನು ಚುನಾವಣಾ ದಿನಾಂಕದಿಂದ 30 ತಿಂಗಳುಗಳ ವರೆಗೆ ನಿಗದಿಪಡಿಸಲಾಗಿದೆ. ಆದರೆ, ಕರ್ನಾಟಕ ಮುನ್ಸಿಪಲ್‌ ಕಾರ್ಪೊರೇಷನ್‌ ಕಾಯ್ದೆ 1976 ರ ಸೆಕ್ಷನ್‌ 10 ರ ಪ್ರಕಾರ ಮೇಯರ್‌ ಮತ್ತು ಉಪಮೇಯರ್‌ ಅಧಿಕಾರಾವಧಿಯನ್ನು ಕೇವಲ 12 ತಿಂಗಳಿಗೆ ಸೀಮಿತಗೊಳಿಸಲಾಗಿದೆ. ಹಾಗಾಗಿ ಕೆಎಂಸಿ ಕಾಯ್ದೆಯ ಸೆಕ್ಷನ್‌ 10 ಅನ್ನು ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಆಯೋಗ ತಿಳಿಸಿದೆ.* ಬಿಬಿಎಂಪಿ ಕಾಯಿದೆ ಸೆಕ್ಷನ್‌ 58 ರಲ್ಲಿ ಒಬಿಸಿಗಳಿಗೆ ಸಂಬಂಧಿಸಿದ ಸೀಟುಗಳ ಮೀಸಲಾತಿ ಕುರಿತು ಯಾವುದೇ ಕಾರ್ಯ ನಡೆದಿಲ್ಲ ಎಂದು ಹೇಳಿದೆ.