Job Description: * ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ವನ್ನು ಆಚರಿಸಲಾಗುತ್ತದೆ.* 1999 ನೇ ಇಸವಿಯ ಜುಲೈ 26 ರಂದು ಭಾರತೀಯ ಸೈನಿಕರು ಅಪರೇಶನ್ ವಿಜಯ್ ಮೂಲಕ ಕಾರ್ಗಿಲ್‌-ಡ್ರಾಸ್‌ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನವನ್ನು ಕಾರ್ಗಿಲ್ ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ.* ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನವಾಗಿದೆ. * 1999 ಮೇ ತಿಂಗಳಿನಲ್ಲಿ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದ ತನಕ ಅಂದರೆ ಸುಮಾರು ಎರಡು ತಿಂಗಳ ಕಾಲ ನಡೆಯಿತು.* ಈ ಯುದ್ಧದಲ್ಲಿ ಲೇಹ್ ಹೆದ್ದಾರಿಯವರೆಗೆ ನುಗ್ಗಿ ಬಂದಿದ್ದ ಪಾಕ್‌ ಸೇನೆಯನ್ನು ಭಾರತೀಯ ಸೇನೆ ಕೆಚ್ಚೆದೆಯಿಂದ ಯಶಸ್ವಿಯಾಗಿ ಹಿಮ್ಮೆಟ್ಟಿಸಿತ್ತು.* ಈ ಯುದ್ಧದಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಸೇರಿದಂತೆ ಸುಮಾರು 527 ಭಾರತೀಯ ಯೋಧರು ಹುತಾತ್ಮರಾದರು.