Job Description: * ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪುರುಷರ ಟೇಬಲ್ ಟೆನ್ನಿಸ್ ತಂಡ ಫೈನಲ್ನಲ್ಲಿ ಭರ್ಜರಿ ಗೆಲುವು ದಾಖಲಿಸಿ ಚಿನ್ನಕ್ಕೆ ಕೊರಳೊಡ್ಡಿದೆ. * ಲೀಗ್ ಹಂತದಲ್ಲಿ ಬಾಂಗ್ಲಾದೇಶ ವಿರುದ್ಧ 3-0 ಅಂತರದ ಗೆಲುವು ಪಡೆದು ಸೆಮಿಫೈನಲ್ಗೆ ಅರ್ಹತೆ ಪಡೆದುಕೊಂಡಿದ್ದ ಅಚಂತಾ ಕಮಲ್ ನಾಯಕತ್ವದ ತಂಡ ಕ್ವಾರ್ಟರ್ ಫೈನಲ್ನಲ್ಲಿ ಬಾರ್ಬಡೋಸ್, ಸಿಂಗಾಪುರ್, ಉತ್ತರ ಐರ್ಲೆಂಡ್ ವಿರುದ್ಧ ಗೆಲುವು ದಾಖಲು ಮಾಡಿತ್ತು.* ಸಿಂಗಾಪುರ್ ತಂಡದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 3-1 ಅಂತರದಲ್ಲಿ ಗೆಲುವು ದಾಖಲಿಸಿರುವ ತಂಡ ಭಾರತಕ್ಕೆ ಚಿನ್ನ ತಂದುಕೊಟ್ಟಿದೆ.*ಅಚಂತಾ ಕಮಲ್ ಗೆ ಇದು 10 ನೇ ಚಿನ್ನದ ಪದಕವಾಗಿದೆ..