Job Description: * ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿ ಅನೇಕ ತಿಂಗಳುಗಳೇ ಆಗಿತ್ತು.* ‘ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಹಲವು ತಿಂಗಳಿಂದ ಕಾಯುತ್ತಿದ್ದ ಪುನೀತ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪದಾನ ಮಾಡುವ ದಿನಾಂಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.* ‘ಕನ್ನಡ ಚಿತ್ರರಂಗದ ಮೇರುನಟ ದಿ. ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ನೀಡಲಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅವರ ಪರವಾಗಿ ಕುಟುಂಬದವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.* ಬಾಲಕನಾಗಿದ್ದಾಗಲೇ ‘ಭಕ್ತ ಪ್ರಹ್ಲಾದ’ ರೀತಿಯ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದರು. ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿ ಕರುನಾಡಿಗೆ ಹೆಮ್ಮೆ ತಂದರು. * ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ಹಲವರಿಗೆ ಅವಕಾಶ ಕೊಟ್ಟರು. ಸಿನಿಮಾ ಮಾತ್ರವಲ್ಲದೇ ಸಮಾಜಮುಖಿ ಕಾರ್ಯಗಳ ಮೂಲಕ ಅವರು ಜನಮನ ಗೆದ್ದರು. ಈ ಎಲ್ಲ ಸಾಧನೆಯನ್ನು ಪರಿಗಣಿಸಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುತ್ತಿದೆ.* ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಅಕ್ಟೋಬರ್ 28 ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಆಗಲಿದೆ. ಅದರ ಬೆನ್ನಲೇ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.