Job Description: * ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿಯವರಿಗೆ ರಾಜ್ಯ ಸರಕಾರ, ರಾಜ್ಯ ಸಚಿವರ ದರ್ಜೆ ಸಮನಾದ ಸ್ಥಾನಮಾನವನ್ನು ನೀಡಿ ಆದೇಶ ಹೊರಡಿಸಿದೆ.* ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ ಕಾಪಾಡುವ ಜವಾಬ್ದಾರಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಹೊಂದಿದೆ.* ಮೈಸೂರು ಮಹಾರಾಜರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪೋಷಣೆಯೊಂದಿಗೆ ಸ್ಥಾಪಿತವಾದ ಸಮಗ್ರ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು 107 ವರ್ಷಗಳ ಸುಧೀರ್ಘ ಹಾಗೂ ಶ್ರೀಮಂತ ಇತಿಹಾಸ ಹೊಂದಿದೆ.* ಇಲ್ಲಿಯವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಯಾವುದೇ ಸರ್ಕಾರ ಸಚಿವರ ಸ್ಥಾನಮಾನವನ್ನು ನೀಡಿರಲಿಲ್ಲ.* ಇದೇ ಮೊಟ್ಟಮೊದಲ ಬಾರಿಗೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಮೆ-ಗರಿಮೆ, ಇತಿಹಾಸವನ್ನು ಮನಗಂಡು, ನಾಡು-ನುಡಿಗೆ ಪರಿಷತ್ತು ಸಲ್ಲಿಸುತ್ತಿರುವ ಅನನ್ಯ ಸೇವೆಯನ್ನು ಪರಿಗಣಿಸಿ ಹಾಗೂ ಪರಿಷತ್ತಿನ ಚುನಾವಣೆ ಇತಿಹಾಸದಲ್ಲಿ ದಾಖಲೆಯನ್ನು ಸೃಷ್ಟಿಸಿದ ಮತ್ತು ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಗುರಿಯನ್ನಿಟ್ಟುಕೊಂಡು, ಅನೇಕ ಕ್ರಾಂತಿಕಾರಿ ಬದಲಾವಣೆಯ ಮುಖೇನ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಕಾರ್ಯವೈಖರಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ತಕ್ಷಣದಿಂದ (03-08-2022) ಜಾರಿಗೆ ಬರುವಂತೆ ರಾಜ್ಯ ಸಚಿವರ ದರ್ಜೆಗೆ ಸಮನಾದ ಸ್ಥಾನಮಾನವನ್ನು ನೀಡಿ ಗೌರವಿಸಿದೆ.