Job Description: * ರಾಜಸ್ಥಾನ ಮೂಲದ 71 ವರ್ಷ ಶ್ರೀ ಜಗದೀಪ್ ಧನಕರ್ ಭಾರತದ ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.* ಜಾಟ್ ನಾಯಕ ಜಗದೀಪ್ ಧನಕರ್ ಈ ಹಿಂದೆ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆಯಲ್ಲಿದ್ದರು. * ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಆಗಸ್ಟ್ 11 ರಂದು ಉಪರಾಷ್ಟ್ರಪತಿಯಾಗಿ ಧನಕರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. * ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ನಿವಾಸದಲ್ಲಿ 14 ನೇ ಉಪರಾಷ್ಟ್ರಪತಿ ಜಗದೀಪ್ ಧನಕರ್ ಗೆ ಶುಭ ಕೋರಲು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮೊದಲಾದ ಹಿರಿಯ ನಾಯಕರು ಸಮಾಗಮಿಸಿದ್ದರು.* ಜಗದೀಪ್ ಧನಕರ್ ವೃತ್ತಿಯಲ್ಲಿ ಜಿ ವನದಲ್ಲಿ ವಕೀಲರಾಗಿರುವ ಇವರು 1989 ರಲ್ಲಿ ರಾಜಕೀಯ ಪ್ರವೇಶಿಸಿದರು.* 2019 ರ ಜುಲೈನಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದರು. ಉಪರಾಷ್ಟ್ರಪತಿ ಸ್ಥಾನಕ್ಕೆ ನಾಮನಿರ್ದೇಶನಗೊಂಡ ನಂತರ ಅವರು ಪಶ್ಚಿಮ ಬಂಗಾಳದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು. * ಎನ್‌ಡಿಎ ಪರವಾಗಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ ಅವರಿಗೆ ಸುಲಭ ಗೆಲುವು ಖಚಿತ ಎನ್ನಲಾಗಿದೆ. 71 ವರ್ಷದ ಜಗದೀಪ್ ಧನಕರ್ ಅವರು ಸಮಾಜವಾದಿ ಹಿನ್ನೆಲೆ ಹೊಂದಿರುವ ರಾಜಸ್ಥಾನದ ಜಾಟ್ ಸಮುದಾಯದ ನಾಯಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.