Job Description: * ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಹಾವೇರಿಯಲ್ಲಿ ನಡೆಯುತ್ತದೆ. * ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಹಾವೇರಿಯಲ್ಲಿ ನ. 11 ರಿಂದ 13 ವರೆಗೆ ನಡೆಯುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ತಿಳಿಸಿದ್ದಾರೆ.* ಕನ್ನಡದ ಮೊದಲ ನಿಘಂಟು ತಜ್ಞ ಫರ್ಡಿನೆಂಟ್ ಕಿಟೆಲ್ ಅವರ ಮೊಮ್ಮಗಳು ಮತ್ತು ಕರ್ನಾಟಕ ಮೂಲದ ಕೆನರಾ ಸಂಸದ ಚಂದ್ರ ಅವರು ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಆಸಕ್ತಿ ತೋರುತ್ತಿದ್ದಾರೆ.* * ಕನ್ನಡ ಸಾಹಿತ್ಯ ಸಮ್ಮೇಳನ : -* ಶಿಕ್ಷಣ ಆಡಳಿತ ಉದ್ಯೋಗ ನಾಮಫಲಕದಲ್ಲಿ ಕನ್ನಡ ಎಂಬ ನಿಯಮಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕಿದೆ.* 1914 ರ ದಿ ಮೈಸೂರು ಎಕಾನಾಮಿಕ್ ಕಾನ್ಫೆರೆನ್ಸ್ (ಮೈಸೂರು ಸಂಪದಭ್ಯುದಯ ಸಮಾಜ) ಸಮ್ಮೆಳನದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಪೂರಕವಾದ ಪರಿಷತ್ತನ್ನು ಸ್ಥಾಪಿಸುವ ವಿಚಾರದಲ್ಲಿ ರಾವ್ ಬಹದ್ದೂರ್ ಎಂ. ಶಾಮರಾವ್, ಕರ್ಪೂರ ಶ್ರೀನಿವಾಸರಾವ್ ಮತ್ತು ಪಿ. ಎಸ್. ಅಚ್ಯುತರಾವ್ ಅವರುಗಳನ್ನೊಳಗೊಂಡ ಉಪಸಮಿತಿಯನ್ನು ರಚಿಸಲಾಯಿತು. * ಈ ಉಪಸಮಿತಿಯು ಅಂದಿನ ವಿವಿಧ ಕನ್ನಡ ನಾಡುಗಳ ಪ್ರಾಜ್ಞರೊಡನೆ ಸಮಾಲೋಚಿಸಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿ, ಆ ಸಮ್ಮೇಳನಗಳಲ್ಲಿ ಕೆಲವು ಉದ್ದೇಶ ಸಾಧನಕ್ರಮಗಳನ್ನು ಚಿಂತಿಸುವ ಕುರಿತಾದ ಮಾರ್ಗದರ್ಶನ ಸೂತ್ರಗಳನ್ನು ರೂಪಿಸಿತು.1 ಕನ್ನಡ ಭಾಷೆಯಲ್ಲಿ ವ್ಯಾಕರಣ, ಚರಿತ್ರೆ, ನಿಘಂಟು ಬರೆಯಿಸುವುದು,2 ನವೀನಶಾಸ್ತ್ರಗಳಿಗೆ ಸಂಬಂಧಪಟ್ಟ ಕನ್ನಡ ಗ್ರಂಥಗಳಲ್ಲಿ ಪ್ರಯೋಗಿಸಲು ಯೋಗ್ಯವಾದ ಪಾರಿಭಾಷಿಕ ಶಬ್ದಗಳ ಕೋಶವನ್ನು ಪ್ರಕಟಿಸುವುದು.3 ತತ್ವಶಾಸ್ತ್ರ, ಪ್ರಕೃತಿವಿಜ್ಞಾನ, ಚರಿತ್ರೆ, ಸಾಹಿತ್ಯ ಮೊದಲಾದ ವಿಷಯಗಳಿಗೆ ಸಂಬಂಧಪಡುವ ಗ್ರಂಥಗಳನ್ನು ಕನ್ನಡದಲ್ಲಿ ಬರೆಯುವುದಕ್ಕೆ ಪ್ರೋತ್ಸಾಹಕೊಟ್ಟು ಅವುಗಳನ್ನು ಪ್ರಚುರಪಡಿಸುವುದು.4 ಕನ್ನಡ ಭಾಷೆಗೂ ಕನ್ನಡ ಗ್ರಂಥಗಳಿಗೂ ಸಂಬಂಧಪಟ್ಟ ಎಲ್ಲಾ ಚರ್ಚಾಂಶಗಳನ್ನೂ ವಿಚಾರಮಾಡಿ ನಿರ್ಣಯಿಸುವುದು. ಬೆರೆ ಭಾಷೆಗಳಲ್ಲಿರುವ ಉತ್ತಮ ಗ್ರಂಥಗಳನ್ನು ಕನ್ನಡಿಸಿ ಪ್ರಕಟಿಸುವುದು.5 ಉತ್ಕೃಷ್ಟವಾದ ಪ್ರಾಚೀನ ಗ್ರಂಥಗಳನ್ನೂ, ಕನ್ನಡ ದೇಶಗಳ ಚರಿತ್ರೆಯನ್ನೊಳಗೊಂಡ ಗ್ರಂಥಗಳನ್ನೂ ಸಂಗ್ರಹಿಸಿ, ಅದನ್ನು ಪರಿಷ್ಕರಿಸಿ ಪ್ರಕಟಿಸುವುದೂ ಅಲ್ಲದೆ, ಕನ್ನಡನಾಡಿನ ಪೂರ್ವಸ್ಥಿತಿಯನ್ನು ವಿಶದಗೊಳಿಸುವ ವಸ್ತುಗಳನ್ನು ಕೂಡಿಟ್ಟು ಅವುಗಳನ್ನು ಕಾಪಾಡುವುದಕ್ಕಾಗಿ ಪ್ರಾಚೀನ ವಸ್ತುಸಂಗ್ರಹಾಲಯವನ್ನೇರ್ಪಡಿಸುವುದು.6 ಕರ್ನಾಟಕ ಭಾಷಾಸಂಸ್ಕರಣ, ಕರ್ಣಾಟಕ ಗ್ರಂಥಾಭಿವೃದ್ಧಿಗಳನ್ನು ಕುರಿತು ಪಂಡಿತಯೋಗ್ಯವಾದ ಲೇಖನಗಳನ್ನೊಳಕೊಂಡ ಕನ್ನಡದ ಪತ್ರಿಕೆಗಳನ್ನು ಪ್ರಕಟಿಸುವುದು.7 ಗ್ರಂಥಕರ್ತರಿಗೆ ಬಿರುದು ಸಂಭಾವನೆ ಕೊಡುವುದು.8 ಕರ್ನಾಟಕ ಭಾಷೆಗೂ ಸಾಹಿತ್ಯಕ್ಕೂ ಸಂಬಂಧಿಸಿದ ಅಪೂರ್ವ ಪರಿಶೋಧನ ಕಾರ್ಯದಲ್ಲಿ ನಿರತರಾಗಿರುವ ಕನ್ನಡ ಅಥವಾ ಸಂಸ್ಕೃತ ವಿದ್ವಾಂಸರಿಗೆ ಪಂಡಿತವೇತನಗಳನ್ನು ಕೊಡುವುದು.9 ಕರ್ನಾಟಕ ಭಾಷೋನ್ನತಿಗೂ, ಗ್ರಂಥಾಭಿವೃದ್ಧಿಗೂ ಸಂಬಂಧಪಡುವ ಸಮಸ್ತ ವಿಷಯಗಳನ್ನೂ ಆಯಾ ಸರ್ಕಾರದವರ ಪರಾಮರ್ಶಕ್ಕೆ ತಂದು ಅವನ್ನು ತೃಪ್ತಿಕರವಾಗಿ ವ್ಯವಸ್ಥೆಮಾಡಿಸಿಕೊಳ್ಳುವುದಕ್ಕೆ ತಕ್ಕ ಏರ್ಪಾಡುಗಳನ್ನು ಮಾಡುವುದು.10 ಕನ್ನಡ ಮಾತನ್ನಾಡುವ ಪ್ರದೇಶಗಳಲ್ಲಿ ಸಾಧ್ಯವಾದಷ್ಟು ಸ್ಥಳಗಳಲ್ಲಿ ಕನ್ನಡದ ವಾಚನಾಲಯಗಳನ್ನೂ ಪುಸ್ತಕಭಂಡಾರಗಳನ್ನೂ ಸ್ಥಾಪಿಸುವುದು.