Job Description: * ಕ್ರಿಕೆಟ್‌ ಅಂಪೈರ್‌ ಆಗಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದ ರೂಡಿ ಕರ್ಜನ್ ದಕ್ಷಿಣ ಆಫ್ರಿಕಾದಲ್ಲಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.* ರೂಡಿ ಕರ್ಜನ್ ಮತ್ತು ಕರ್ಜನ್ ಅವರ ಮೂವರು ಸ್ನೇಹಿತರು ಕಾರಿನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.* ದಕ್ಷಿಣ ಆಫ್ರಿಕಾ ರೈಲ್ವೇ ಇಲಾಖೆಯಲ್ಲಿ ಕ್ಲರ್ಕ್‌ ಆಗಿ ಕೆಲಸ ಮಾಡುತ್ತಿದ್ದ ಕೋರ್ಟ್ಜನ್‌, ಲೀಗ್‌ಗಳಲ್ಲಿ ಕ್ರಿಕೆಟ್‌ ಆಡುತ್ತಿದ್ದರು. * 1981 ರಲ್ಲಿ ಕರ್ಜನ್‌ ಅಂಪೈರ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಅಂಪೈರಿಂಗ್‌ ಆರಂಭಿಸಿದರು. * ಹತ್ತು ವರ್ಷಗಳ ನಂತರ ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಪೋರ್ಟ್‌ ಎಲಿಜಬೆತ್‌ನಲ್ಲಿ ನಡೆದ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. * ಕರ್ಜನ್ ರವರು 209 ಏಕದಿನ ಪಂದ್ಯಗಳು, 14 ಟಿ-ಟ್ವೆಂಟಿ ಪಂದ್ಯಗಳಿಗೆ ಅವರು ಅಂಪೈರಿಂಗ್‌ ಮಾಡಿದ್ದಾರೆ.* 1990 ರಿಂದ 2010 ವರೆಗೆ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅಂಪೈರ್‌ ಹಾಗೂ ರೆಫರಿ ಆಗಿದ್ದರು.