Job Description: * 11/08/2022 ರಂದು ರಾಷ್ಟ್ರಪತಿ ಭವನದಲ್ಲಿ ಭಾರತದ 14 ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. * ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧನಕರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.* ಅವರು "ಪೂಜ್ಯ ಬಾಪು ಅವರಿಗೆ ಗೌರವ ಸಲ್ಲಿಸುವಾಗ ರಾಜ್ ಘಾಟ್‌ನ ಪ್ರಶಾಂತ ಭವ್ಯತೆಯಲ್ಲಿ ಭಾರತ ಸೇವೆಯಲ್ಲಿ ಸದಾ ಇರುವಂತೆ ಆಶೀರ್ವಾದ, ಸ್ಫೂರ್ತಿ ಮತ್ತು ಪ್ರೇರಣೆಯನ್ನು ಅನುಭವಿಸಿದೆ" ಎಂದು ಬರೆದುಕೊಂಡಿದ್ದಾರೆ. * ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ನ್ಯಾಶನಲ್ ಡೆಮಾಕ್ರಟಿಕ್ ಅಲಯನ್ಸ್ ಅಭ್ಯರ್ಥಿ ಜಗದೀಪ್ ಧನಕರ್ ಅವರು ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರನ್ನು ಭಾರಿ ಅಂತರದಿಂದ ಸೋಲಿಸಿ ದೇಶದ 14 ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.* 2002 ಮತ್ತು 2007 ರ ನಡುವೆ ಅಧಿಕಾರದಲ್ಲಿದ್ದ ಭೈರೋನ್ ಸಿಂಗ್ ಶೇಖಾವತ್ ನಂತರ ರಾಜಸ್ಥಾನದಿಂದ ಉಪರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾದ ಎರಡನೇ ವ್ಯಕ್ತಿ ಈ ಧನಕರ್ ರವರು ಆಗಿದ್ದಾರೆ.