Job Description: * ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 24, 2022 ರಂದು ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ, ಹಾಗೂ ಎರಡು ಪ್ರಮುಖ ಆರೋಗ್ಯ ಉಪಕ್ರಮಗಳನ್ನು ಪ್ರಧಾನಮಂತ್ರಿಯವರು ಉದ್ಘಾಟನೆ/ ರಾಷ್ಟ್ರಕ್ಕೆ ಸಮರ್ಪಣೆ ಮಾಡಲಿದ್ದಾರೆ. * ಸಾಹಿಬ್ಜಾದಾ ಅಜಿತ್ ಸಿಂಗ್ ನಗರ ಜಿಲ್ಲೆ (ಮೊಹಾಲಿ)ಯ ನ್ಯೂ ಚಂಡೀಗಢದ ಮುಲ್ಲನ್ ಪುರ್ ನಲ್ಲಿ 'ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ'ವನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ.* ಹರಿಯಾಣದ ಫರಿದಾಬಾದ್ ನಲ್ಲಿ ಅಮೃತಾ ಆಸ್ಪತ್ರೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದು, ಇದರಿಂದಾಗಿ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್.ಸಿ.ಆರ್.) ಆಧುನಿಕ ವೈದ್ಯಕೀಯ ಮೂಲಸೌಕರ್ಯಗಳ ಲಭ್ಯತೆಗೆ ಹೆಚ್ಚಿನ ಅವಕಾಶ ಸಿಗಲಿದೆ.