Job Description: * ಕೇಂದ್ರ ಸಾಹಿತ್ಯ ಅಕಾಡೆಮಿ 2022 ರ ಯುವ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಮತ್ತು ಶಿರಸಿ ಸಿದ್ದಾಪುರದ ತಮ್ಮಣ್ಣ ಬೀಗಾರ ಆಯ್ಕೆಯಾಗಿದ್ದಾರೆ.* ದಾದಾಪೀರ್ ಜೈಮನ್ ಅವರ ‘ನೀಲಕುರಿಂಜಿ’ ಕಥಾ ಸಂಕಲನಕ್ಕೆ ಯುವ ಸಾಹಿತ್ಯ ಪ್ರಶಸ್ತಿ ಬಂದಿದೆ, ತಮ್ಮಣ್ಣ ಬೀಗಾರ ಅವರ ‘ಬಾವಲಿ ಗುಹೆ’ ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ಸಂದಿದೆ. * ‘ನೀಲಕುರಿಂಜಿ’ಯನ್ನು ರಾಯಚೂರು ಜಿಲ್ಲೆಯ ಕೆ. ಗುಡುದಿನ್ನಿಯ ವೈಷ್ಣವಿ ಪ್ರಕಾಶನವು ಪ್ರಕಟಿಸಿದೆ. ‘ಬಾವಲಿ ಗುಹೆ’ಯನ್ನು ಬೆಂಗಳೂರಿನ ಅಭಿನವ ಪ್ರಕಾಶನ ಪ್ರಕಟಿಸಿದೆ. * ಪುಸ್ತಕ ಆಯ್ಕೆ ಪ್ರಕ್ರಿಯೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸಂಯೋಜಕರಾದ ಡಾ. ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ನಡೆಯಿತು.* ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ. ಚಂದ್ರಶೇಖರ ಕಂಬಾರ ಅವರು ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದ್ದಾರೆ. * ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಶಸ್ತಿ 50,000 ರೂ. ಹಾಗೂ ಸನ್ಮಾನ ಪಾತ್ರವನ್ನು ಒಳಗೊಂಡಿರುತ್ತದೆ