Job Description: * ಸುಪ್ರೀಂ ಕೋರ್ಟ್ ನ 49 ನೇ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.* ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸುಪ್ರೀಂ ಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಗಳಾದ ಉದಯ್ ಉಮೇಶ್ ಲಲಿತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.* ನ್ಯಾಯಮೂರ್ತಿ ಎನ್ ವಿ ರಮಣ ಅವರು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ನಿವೃತ್ತಿ ಹೊಂದಿದ ಬೆನ್ನಲೇ ಉದಯ್ ಉಮೇಶ್ ಲಲಿತ್ ಅವರು ನೂತನ ನ್ಯಾಯಮೂರತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. * ನ್ಯಾಯಮೂರ್ತಿ ಲಲಿತ್ ಅವರು ಭಾರತದ ನ್ಯಾಯಾಂಗ ವ್ಯವಸ್ಥೆಯ ಪರಮೋಚ್ಛ ಕೇಂದ್ರ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರದಲ್ಲಿದ್ದು ನವೆಂಬರ್ 8 ರಂದು ನಿವೃತ್ತರಾಗಲಿದ್ದಾರೆ. * ನ್ಯಾಯಮೂರ್ತಿ ಲಲಿತ್ ಅವರು ನವೆಂಬರ್ 9, 1957 ರಂದು ಮಹಾರಾಷ್ಟ್ರದ ಸೋಲಾಪುರದಲ್ಲಿ ಜನಿಸಿದರು. ಅವರ ತಂದೆ ಯು ಆರ್ ಲಲಿತ್ ಅವರು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿದ್ದರು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿದ್ದರು.* ನ್ಯಾಯಮೂರ್ತಿ ಲಲಿತ್ ಅವರು ಬರುವ ನವೆಂಬರ್ 8 ರಂದು ನಿವೃತ್ತಿಯಾದ ನಂತರ, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರನ್ನು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ನಿರ್ಧರಿಸಲಾಗಿದೆ.