Job Description: * ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಪುರುಷರ ಬ್ಯಾಡ್ಮಿಂಟನ್ ಡಬಲ್ಸ್‌ ಜೋಡಿಯಾದ ಸಾತ್ವಿಕ್‌-ಚಿರಾಗ್ ಜೋಡಿ ಸೆಮಿಫೈನಲ್ ಪ್ರವೇಶಿಸಿ ಕಂಚಿನ ಪದಕವನ್ನು ಖಚಿತಪಡಿಸಿಕೊಳ್ಳುವ ಮೂಲಕ ಸಾಧನೆ ಮಾಡಿದ್ದಾರೆ.* ಷಟ್ಲರ್‌ಗಳಾದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್ ರಂಕಿರೆಡ್ಡಿ ಅವರು ಜಪಾನ್‌ನ ಯುಗೊ ಕೊಬಯಾಶಿ ಮತ್ತು ಟಕುರೊ ಹಾಕಿ ಅವರನ್ನು 24-22, 15-21, 21-14 ರಿಂದ ಸೋಲಿಸಿ ಇತಿಹಾಸ ನಿರ್ಮಿಸಿದ್ದಾರೆ.* ಇವರಿಬ್ಬರು ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಪುರುಷರ ಡಬಲ್ಸ್ ವಿಭಾಗದ ಆಟಗಾರರಾಗಿದ್ದಾರೆ. * ಜ್ವಾಲಾ ಗುಟ್ಟಾ ಮತ್ತು ಅಶ್ವಿನಿ ಪೊನ್ನಪ್ಪ ಅವರ ಮಹಿಳಾ ತಂಡದ ನಂತರ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಪದಕ ಗೆದ್ದ 2 ನೇ ಜೋಡಿ ಎಂಬ ಹೆಗ್ಗಳಿಕೆಗೆ ಈ ಜೋಡಿ ಪಾತ್ರರಾಗಿದ್ದಾರೆ. * ಈ ಮೊದಲು 2011 ರಲ್ಲಿ ಭಾರತದ ಮಹಿಳಾ ಡಬಲ್ಸ್‌ ಜೋಡಿಯಾದ ಅಶ್ವಿನಿ ಪೊನ್ನಪ್ಪ ಹಾಗೂ ಜ್ವಾಲಾ ಗುಟ್ಟಾ ಜೋಡಿಯು ಕಂಚಿನ ಪದಕ ಜಯಿಸಿತ್ತು.* ಇದೀಗ ಭಾರತದ ಪುರುಷರ ಡಬಲ್ಸ್‌ ಜೋಡಿಯು ಸೆಮೀಸ್ ಪ್ರವೇಶಿಸುವುದರೊಂದಿಗೆ ಬ್ಯಾಡ್ಮಿಂಟನ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟಾರೆ 13 ನೇ ಪದಕ ಭಾರತದ ಪಾಲಾಗಿದೆ.* * ವಿಶ್ವ ಬ್ಯಾಡ್ಮಿಂಟನ್ ಫೆಡರೇಶನ್ ಕುರಿತು ತಿಳಿಯೋಣ : -* ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯಿಂದ ಗುರುತಿಸಲ್ಪಟ್ಟ ಬ್ಯಾಡ್ಮಿಂಟನ್ ಕ್ರೀಡೆಯ ಅಂತರರಾಷ್ಟ್ರೀಯ ಆಡಳಿತ ಮಂಡಳಿಯಾಗಿದೆ. * ಇದನ್ನು 1934 ರಲ್ಲಿ ಒಂಬತ್ತು ಸದಸ್ಯ ರಾಷ್ಟ್ರಗಳೊಂದಿಗೆ ಇಂಟರ್ನ್ಯಾಷನಲ್ ಬ್ಯಾಡ್ಮಿಂಟನ್ ಫೆಡರೇಶನ್ ಎಂದು ಸ್ಥಾಪಿಸಲಾಯಿತು.