Job Description: * ಸೆಪ್ಟೆಂಬರ್ 1 ಮತ್ತು 2 ರಂದು ಕರ್ನಾಟಕ ಮತ್ತು ಕೇರಳಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ.* ಸೆಪ್ಟೆಂಬರ್ 1 ರಂದು ಕೊಚ್ಚಿನ್ ವಿಮಾನ ನಿಲ್ದಾಣದ ಬಳಿಯ ಕಾಲಡಿ ಗ್ರಾಮದಲ್ಲಿರುವ ಆದಿ ಶಂಕರಾಚಾರ್ಯರ ಪವಿತ್ರ ಜನ್ಮಸ್ಥಳವಾದ ಶ್ರೀ ಆದಿ ಶಂಕರ ಜನ್ಮ ಭೂಮಿ ಕ್ಷೇತ್ರಕ್ಕೆ ಪ್ರಧಾನಮಂತ್ರಿ ಅವರು ಭೇಟಿ ನೀಡಲಿದ್ದಾರೆ.* ಸೆಪ್ಟೆಂಬರ್ 2 ರಂದು ಪ್ರಧಾನಮಂತ್ರಿ ಅವರು ಕೊಚ್ಚಿಯ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಐ.ಎನ್.ಎಸ್.ವಿಕ್ರಾಂತ್ ಎಂಬ ಹೆಸರಿನ ಮೊದಲ ಅನಿರ್ದಿಷ್ಟ ವಿಮಾನವಾಹಕ ನೌಕೆಯನ್ನು ನಿಯೋಜಿಸಲಿದ್ದಾರೆ.* ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ಅಡಿಯಲ್ಲಿ ಸಾರ್ವಜನಿಕ ವಲಯದ ಶಿಪ್ ಯಾರ್ಡ್ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಿಂದ ನಿರ್ಮಿಸಲಾದ ವಿಕ್ರಾಂತ್, ಅತ್ಯಾಧುನಿಕ ಸ್ವಯಂಚಾಲಿತ ವೈಶಿಷ್ಟ್ಯಗಳೊಂದಿಗೆ ರುಪುಗೊಂಡಿದೆ ಮತ್ತು ಇದು ಭಾರತದ ಸಾಗರ ಇತಿಹಾಸದಲ್ಲಿ ನಿರ್ಮಿಸಲಾದ ಅತಿದೊಡ್ಡ ಹಡಗಾಗಿದೆ.* ಪ್ರಧಾನಮಂತ್ರಿ ಅವರು ಮಂಗಳೂರಿನಲ್ಲಿ ಸುಮಾರು 3800 ಕೋಟಿ ರೂ.ಗಳ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು.* ನವಮಂಗಳೂರು ಬಂದರು ಪ್ರಾಧಿಕಾರವು ಕೈಗೆತ್ತಿಕೊಂಡಿರುವ ಕಂಟೈನರ್‌ಗಳು ಮತ್ತು ಇತರ ಸರಕುಗಳನ್ನು ನಿರ್ವಹಿಸಲು ಲಂಗರು ನಂ. 14 ರ ಯಾಂತ್ರೀಕರಣಕ್ಕಾಗಿ 280 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಯೋಜನೆಯನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ.* ಪ್ರಧಾನಮಂತ್ರಿ ಅವರು, ಬಂದರು ಕೈಗೆತ್ತಿಕೊಂಡಿರುವ ಸುಮಾರು 1000 ಕೋಟಿ ರೂ.ಗಳ ಐದು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು.* ಶೇಖರಣಾ ಟ್ಯಾಂಕ್ ಗಳು ಮತ್ತು ಖಾದ್ಯ ತೈಲ ಸಂಸ್ಕರಣಾಗಾರಗಳ ನಿರ್ಮಾಣ, ಬಿಟುಮೆನ್ ಸಂಗ್ರಹಣಾ ಮತ್ತು ಸಂಬಂಧಿತ ಸೌಲಭ್ಯಗಳ ನಿರ್ಮಾಣ ಮತ್ತು ಬಿಟುಮೆನ್ ಮತ್ತು ಖಾದ್ಯ ತೈಲ ಸಂಗ್ರಹ ಮತ್ತು ಸಂಬಂಧಿತ ಸೌಲಭ್ಯಗಳ ನಿರ್ಮಾಣ ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸುವರು.* ಪ್ರಧಾನಮಂತ್ರಿ ಅವರು ಕುಳಾಯಿಯಲ್ಲಿ ಮೀನುಗಾರಿಕಾ ಬಂದರಿನ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಇದು ಮೀನು ಹಿಡಿಯುವಿಕೆಯನ್ನು ಸುರಕ್ಷಿತವಾಗಿ ನಿರ್ವಹಿಸಲು ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಉತ್ತಮ ಬೆಲೆಗಳಿಗೆ ಅನುವು ಮಾಡಿಕೊಡುತ್ತದೆ.* ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಕೈಗೆತ್ತಿಕೊಂಡಿರುವ ಎರಡು ಯೋಜನೆಗಳಾದ ಬಿಎಸ್ ವಿಐ(1830 ಕೋಟಿ ರೂ) ಉನ್ನತೀಕರಣ ಯೋಜನೆ ಮತ್ತು ಸಮುದ್ರ ನೀರು ಶುದ್ಧೀಕರಣ ಘಟಕವನ್ನು ಪ್ರಧಾನಮಂತ್ರಿ ಅವರು ಉದ್ಘಾಟಿಸಲಿದ್ದಾರೆ (ಸಮುದ್ರ ನೀರಿನಿಂದ ಬೇರ್ಪಡಿಸಿ ಶುದ್ಧೀಕರಿಸುವ ಘಟಕ (RS 677 ಕೋಟಿ) )