Job Description: * ಭಾರತೀಯ ಪ್ರವಾಸಿ ಗರ್ಭಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ಸಂಭವಿಸಿದ ಕೆಲವು ಗಂಟೆಗಳಲ್ಲೇ ಪೋರ್ಚುಗಲ್‌ನ ಆರೋಗ್ಯ ಸಚಿವೆ ಮಾರ್ಟಾ ಟೆಮಿಡೊ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.* ನಿಯೋನಾಟಾಲಜಿ ಸೇವೆ ಒದಗಿಸಲು ಸಾಧ್ಯವಾಗದ ಹಿನ್ನೆಲೆ ಸಾಂತಾ ಮಾರಿಯಾ ಆಸ್ಪತ್ರೆಯಿಂದ ರಾಜಧಾನಿಯ ಮತ್ತೊಂದು ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಸ್ಥಳಾಂತರಿಸಲಾಗುತ್ತಿದ್ದು, ಈ ವೇಳೆ ಮಾರ್ಗಮಧ್ಯದಲ್ಲಿಯೇ 34 ವರ್ಷದ ಗರ್ಭಿಣಿಯೊಬ್ಬರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.* ಪೋರ್ಚುಗಲ್ ಪ್ರವಾಸಕ್ಕೆ ತೆರಳಿದ್ದ ಭಾರತೀಯ ಮಹಿಳೆಗೆ ತುರ್ತು ಸಿಸೇರಿಯನ್ ನಂತರ ಆಕೆಯ ಮಗುವನ್ನು ಹೆರಿಗೆ ಮಾಡಲಾಗಿತ್ತು. ಆದರೆ ಮಹಿಳೆಯ ಸಾವಿನ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.* ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ದೇಶದ ಲಸಿಕೆ ವಿತರಣೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರರಾಗಿರುವ ಮಾರ್ಟಾ ಟೆಮಿಡೊ, ವೈದ್ಯರ ಕೊರತೆಯಿಂದಾಗಿ ತುರ್ತು ಪ್ರಸೂತಿ ಸೇವೆಗಳನ್ನು ತಾತ್ಕಾಲಿಕವಾಗಿ ಮುಚ್ಚುವ ನಿರ್ಧಾರ ಮಾಡಿದ್ದರು. * ಈ ನಿರ್ಧಾರದಿಂದಲೇ ಭಾರೀ ಹಿನ್ನಡೆಯನ್ನು ಎದುರಿಸಿದರು. ಹೀಗಾಗಿ ತಮ್ಮ ಸ್ಥಾನಕ್ಕೆ ಟೆಮಿಡೋ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ಪ್ರಧಾನಮಂತ್ರಿ ಆಂಟೋನಿಯೊ ಕೋಸ್ಟಾ ಹೇಳಿದ್ದಾರೆ.