Job Description: * ಪ್ರತಿ ವರ್ಷ ಸೆಪ್ಟೆಂಬರ್‌ 5 ರಂದು ದೇಶದಾದ್ಯಂತ ಶಿಕ್ಷಕರ ದಿನ ಆಚರಿಸಲಾಗುತ್ತದೆ. * ಭಾರತದಲ್ಲಿ 1962 ರಿಂದ ಪ್ರತಿವರ್ಷ ಸೆಪ್ಟೆಂಬರ್‌ 5 ರಂದು ಶಿಕ್ಷಕರ ದಿನವಾಗಿ ಆಚರಿಸಲಾಗುತ್ತದೆ. * ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ ಪ್ರಸಿದ್ದ ತತ್ವಜ್ಞಾನಿಗಳಲ್ಲಿ ಒಬ್ಬರು ಅವರ ಸೆಪ್ಟೆಂಬರ್‌ 5 ಜನ್ಮದಿನವನ್ನು ಶಿಕ್ಷಕರ ದಿನ ಎಂದು ಆಚರಿಸುವುದು. * ಇವರು ಮದ್ರಾಸ್‌ ಪ್ರೆಸಿಡೆನ್ಸಿ ಕಾಲೇಜು, ಮೈಸೂರು ವಿಶ್ವವಿದ್ಯಾಲಯ, ಕಲ್ಕತ್ತ ವಿಶ್ವವಿದ್ಯಾಲಯ, ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಮತ್ತು ಚಿಕಾಗೋ ವಿಶ್ವವಿದ್ಯಾಲಯದಲ್ಲಿ ಫ್ರೊಫೆಸರ್‌ ಆಗಿ ಸೇವೆ ಸಲ್ಲಿಸಿದ್ದಾರೆ. * ಇವರು ರಾಷ್ಟ್ರಪತಿಗಳಾಗಿದ್ದಾಗ 'ಶಿಕ್ಷಕರು ದೇಶದ ಅತ್ಯುತ್ತಮ ಮಿದುಳುಗಳಾಗಬೇಕು' ಎಂದಿದ್ದರು. * ಒಮ್ಮೆ ಅವರ ವಿದ್ಯಾರ್ಥಿಗಳು ಮತ್ತು ಸ್ನೇಹಿತರು ಬಂದು ತಮ್ಮ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಯೋಜಿಸಿದ್ದೇವೆ. ನೀವು ಸಂಭ್ರಮಾಚರಣೆಗೆ ಖಂಡಿತ ಬರಬೇಕು ಎಂದು ಆಹ್ವಾನಿಸಿದರಂತೆ. ಇವರ ಆಹ್ವಾನಕ್ಕೆ ಉತ್ತರಿಸಿದ ರಾಧಾಕೃಷ್ಣನ್ ಅವರು,ಒಂದೊಮ್ಮ ನನ್ನ ಜನ್ಮದಿನವನ್ನು ಶಿಕ್ಷಕರ ದಿನವಾಗಿ ಆಚರಿಸಿದರೆ ನನಗೆ ಹೆಚ್ಚು ಸಂತೋಷವಾಗುತ್ತದೆ ಎಂದರಂತೆ.