Job Description: * ಉತ್ತರ ಕನ್ನಡ ಜಿಲ್ಲೆಯ ಕಾರವಾರ- ಜೊಯಿಡಾ ಭಾಗದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ವಿದ್ಯಾ ದಾನ ಮಾಡಿದ್ದ ನಿವೃತ್ತ ಶಿಕ್ಷಕ ಹಾಗೂ ಮಾಜಿ ಶಿಕ್ಷಣ ಸಚಿವ ಪ್ರಭಾಕರ್ ರಾಣೆಶಿಕ್ಷಕರ ದಿನದಂದೇ ನಿಧನರಾಗಿದ್ದಾರೆ.* ಕಾರವಾರ- ಜೊಯಿಡಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ರಾಣೆ, ಗ್ರಂಥಾಲಯ ಮತ್ತು ವಯಸ್ಕರ ಶಿಕ್ಷಣ ಸಚಿವರಾಗಿದ್ದರು.* ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಗೆ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇರ್ಪಡೆಗೊಂಡು ಸೇವೆ ಸಲ್ಲಿಸಿದ್ದ ಅವರು, ಬಳಿಕ ಅದೇ ಸಂಸ್ಥೆಗೆ ಅಧ್ಯಕ್ಷರಾಗಿದ್ದರು. ನಂತರದಲ್ಲಿ ಬಾಪೂಜಿ ಗ್ರಾಮೀಣ ವಿಕಾಸ ಸಂಸ್ಥೆ ಅಡಿ ಗ್ರಾಮೀಣ ಭಾಗದಲ್ಲಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜು ಆರಂಭಿಸಿ, ವಿವಿಧೆಡೆ ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಕೊಡುಗೆ ನೀಡಿದ್ದರು.