Job Description: * ಅರಣ್ಯ , ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು.* ಪ್ರಧಾನಿ ನರೇಂದ್ರ ಮೋದಿ ಸಚಿವ ಉಮೇಶ್ ಕತ್ತಿ ಪತ್ನಿ ಶೀಲಾ ಕತ್ತಿಗೆ ಪತ್ರದ ಮೂಲಕ ಸಾಂತ್ವನ ಹೇಳಿದ್ದಾರೆ.* ಉಮೇಶ್ ಕತ್ತಿ ಅವರು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಅವರು ಈ ಹಿಂದೆ ಅರಣ್ಯ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದರು. 9 ಸಲ ಚುನಾವಣೆ ಎದುರಿಸಿ 8 ಬಾರಿ ಜಯ ಗಳಿಸಿದ್ದರು.* ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಮಾತನ್ನು ಪದೇ ಪದೇ ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.* ಉಮೇಶ್ ಕತ್ತಿ ಅವರ ತಂದೆಯಾದ ವಿಶ್ವನಾಥ್ ಕತ್ತಿ ಅವರೂ ಶಾಸಕರಾಗಿದ್ದರು. ತಂದೆಯವರ ನಿಧನದ ನಂತರ ಉಮೇಶ್ ಕತ್ತಿ ರಾಜಕೀಯ ಸೇರಿದರು. * 1996 ರಲ್ಲಿ ಮೊದಲ ಬಾರಿಗೆ ಸಕ್ಕರೆ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅವರು 2008 ರಲ್ಲಿ ತೋಟಗಾರಿಕೆ ಮತ್ತು ಬಂಧಿಖಾನೆ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದರು. 2010 ರಲ್ಲಿ ಕೃಷಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅವರು ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ ಖ್ಯಾತಿಗೆ ಪಾತ್ರವಾಗಿದ್ದರು.