Job Description: * ರಾಜ್ಯ ಸರ್ಕಾರವು ಕೆಎಂಎಫ್‌ ಸಹಯೋಗದೊಂದಿಗೆ ಆರಂಭಿಸಲಾದ ಕ್ಷೀರಭಾಗ್ಯ ಯೋಜನೆಗೆ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್‌ ಪ್ರಶಸ್ತಿ ನೀಡಿ ಗೌರವಿಸಿದೆ.* ಶಾಲೆ ಹಾಗೂ ಅಂಗನವಾಡಿ ಮಕ್ಕಳ ಅಪೌಷ್ಟಿಕತೆ ನಿವಾರಿಸಿ. ಹಿಂದಿನ ಕಾಂಗ್ರೆಸ್ ಸರ್ಕಾರವು ಸಹಯೋಗದೊಂದಿಗೆ ಆರಂಭಿಸಿದ್ದ ಕ್ಷೀರಭಾಗ್ಯ ಯೋಜನೆಗೆ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.* ಉತ್ತರ ಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್‌ ಗೆ ಪ್ರಶಸ್ತಿಯನ್ನು ವಿಧಿಸಲಾಯಿತು.* ಈ ಪ್ರಶಸ್ತಿಯನ್ನು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪರವಾಗಿ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ಮಾರುಕಟ್ಟೆ ವಿಭಾಗದ ನಿರ್ದೇಶಕ ರಘುನಂದನ್, ಮಾರುಕಟ್ಟೆ ವಿಭಾಗದ ಅಪರ ನಿರ್ದೇಶಕ ಸತೀಶ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ಡಿಜಿ ಕ್ಯಾರೋಲಿನ್ ಇಮೊಂಡ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.* ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ 1 ರಿಂದ 10 ನೇ ತರಗತಿಯ ಅಂದಾಜು 54 ಸಾವಿರ ಅಂಗನವಾಡಿಗಳಲ್ಲಿ 6 ತಿಂಗಳಿನಿಂದ 6 ವರ್ಷದವರೆಗಿನ 39,50 ಲಕ್ಷ ಮಕ್ಕಳು ಸೇರಿ ರಾಜ್ಯದ ಒಂದು ಕೋಟಿ ಮಕ್ಕಳಿಗೆ 150 ಮಿ.ಲೀ ಹಾಲನ್ನು ವಾರದಲ್ಲಿ 5 ದಿನ ನೀಡಲಾಗುತ್ತಿದೆ.* ಚೀನಾ ಮತ್ತು ನಾರ್ವೇ ಸೇರಿ 144 ದೇಶಗಳಿಂದ ಅರ್ಜಿಗಳು ಸಲ್ಲಿಕೆಯಾಗಿದ್ದುಅದರಲ್ಲಿ ಕೆಎಂಎಫ್‌ನ ಸಾಧನೆಗಳನ್ನು ಗುರುತಿಸಿ ಕ್ಷೀರಭಾಗ್ಯ ಯೋಜನೆಗೆ ಇನ್ನೋವೇಷನ್ತವೆ. ಸ್ಕೂಲ್ ಮಿಲ್ಕ್ ಫೋಗ್ರಾಮ್ಸ್ ಪ್ರತಿಷ್ಠಿತ ಪ್ರಶಸ್ತಿ ನೀಡಿದೆ.