Job Description: * ರಾಜ್ಯದ ಸಶಸ್ತ್ರ ಮೀಸಲು ಪಡೆಯಲ್ಲಿ ಇದೆ ಮೊದಲ ಬಾರಿಗೆ 79 ಹುದ್ದೆಗಳನ್ನು ತೃತೀಯಲಿಂಗಿ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. * ರಾಜ್ಯದ ಸಶಸ್ತ್ರ ಮೀಸಲು ಪಡೆಯಲ್ಲಿ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಖಾಲಿ ಇರುವ ಒಟ್ಟು 3484 ಹುದ್ದೆಗಳ ಪೈಕಿ 79 ಹುದ್ದೆಗಳನ್ನು ತೃತೀಯ ಲಿಂಗಿಗಳಿಗೆ ಮೀಸಲಿಡಲಾಗಿದೆ. * ತೃತೀಯ ಲಿಂಗಿ ವ್ಯಕ್ತಿಗಳಿಗೆ 2020 ನಿಯಮದ ಅನ್ವಯ ಈಗ ರಾಜ್ಯ ಪೊಲೀಸ್ ನೇಮಕಾತಿಯಲ್ಲೂ ಮೀಸಲು ನೀಡಲಾಗಿದೆ. * ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿಸಲ್ಲಿಸುವ ತೃತೀಯ ಲಿಂಗಿ ವ್ಯಕ್ತಿಗಳು ಕಡ್ಡಾಯವಾಗಿ ಜಿಲ್ಲಾ ಮ್ಯಾಜಿಸ್ಟಿಕ್ ಅವರಿಂದ ಪ್ರಮಾಣಪತ್ರವನ್ನು ಪಡೆದಿರಬೇಕು.