Job Description: * ರಾಜ್ಯದಾದ್ಯಂತ ಈ ಯೋಜನೆ ಅಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲೇ ಮಧ್ಯಾಹ್ನ ಪೌಷ್ಟಿಕ ಬಿಸಿಯೂಟ ನೀಡಲಾಗುತ್ತಿದೆ.* ಮಾತೃಪೂರ್ಣ ಯೋಜನೆ ಅಡಿಯಲ್ಲಿ ಗುಡ್ಡಗಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಮನೆಗೆ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಕಲ್ಪಿಸಲಾಗಿದೆ. * ಈ ವರ್ಷದ ಮಳೆಗಾಲ ಮುಗಿಯುವವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ತಿಳಿಸಿದರು.* ಮನೆಗೆ ಆಹಾರ ಪದಾರ್ಥಗಳನ್ನು ತಲುಪಿಸಿದರೆ ಗರ್ಭಿಣಿಯರಿಗೆ CA ದೊರೆಯುವುದಿಲ್ಲ. ಇದರಿಂದ, ಅಪೌಷ್ಠಿಕತೆಯಿಂದ ಬಳಲುತ್ತಾರೆ ಎನ್ನುವ ದೂರುಗಳಿದ್ದವು. ಹೀಗಾಗಿಯೇ ಅಂಗನವಾಡಿ ಕೇಂದ್ರಗಳಲ್ಲೇ ಬಿಸಿಯೂಟ ವ್ಯವಸ್ಥೆ ಮಾಡಲಾಗಿದೆ.