Job Description: * ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ತೀವ್ರ ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.* ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಹುಟ್ಟೂರು ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಸೈಫೈಯಲ್ಲಿ ಮಂಗಳವಾರ ಅಂತ್ಯಕ್ರಿಯೆ ನಡೆಯಲಿದೆ.* ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ ಅವರು ರಾಜ್ಯದಲ್ಲಿ ಮೂರು ದಿನಗಳಕಾಲ ಶೋಕಾಚರಣೆ ಇರುತ್ತದೆ ಎಂದು ತಿಳಿಸಿದ್ದಾರೆ. * ಮುಲಾಯಂ ಸಿಂಗ್ ಅವರ ಉತ್ತರ ಪ್ರದೇಶದಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ, 1996-98 ರ ಅವಧಿಯಲ್ಲಿ ರಕ್ಷಣಾ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.* ಮುಲಾಯಂ ಅವರು 10 ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ಮತ್ತು 7 ಬಾರಿ ಸಂಸದರಾಗಿದ್ದರೆ.* ಮುಲಾಯಂ ಅವರು ಸಂಸದರಾಗಿ ಮುಖ್ಯವಾಗಿ ಮೈನಪುರಿ ಮತ್ತು ಅಜಂಗಡದಿಂದ ಗೆದ್ದಿದ್ದರು.