Job Description: * ನವೆಂಬರ್‌ 10 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಎಂಬ ರೈಲ್ ಅನ್ನು ಚೆನ್ನೈ-ಬೆಂಗಳೂರು ಮತ್ತು ಮೈಸೂರು ಚಾಲನೆ ನೀಡಲಿದ್ದಾರೆ.* ವಂದೇ ಭಾರತ್ "2.0 " ರೈಲುಗಳು "ಕವಚ" ಎಂಬ ರೈಲು ಡಿಕ್ಕಿ ತಪ್ಪಿಸುವ ವ್ಯವಸ್ಥೆ ಒಳಗೊಂಡಂತೆ ಹಲವಾರು ಅತ್ಯಾಧುನಿಕ ಸುರಕ್ಷತಾ ವಿಶೇಷತೆಗಳನ್ನು ಒಳಗೊಂಡಿದೆ. * ದಕ್ಷಿಣ ಭಾರತದ ಮೊಟ್ಟಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ನವೆಂಬರ್‌ 10 ರಂದು ಚಾಲನೆಯಾಗಲಿದೆ, ಅಂದಾಜು 483 ಕಿಲೋಮೀಟರ್‌ ಮಾರ್ಗದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಸಂಚರಿಸಲಿದೆ ಎಂದು ಸಚಿವ ಸಿ.ಎನ್‌ ಅಶ್ವತ್ಥನಾರಾಯಣ ಟ್ವೀಟ್‌ ಮೂಲಕ ಹೇಳಿದ್ದಾರೆ.* ದೇಶದ ಐದನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಆಗಿದ್ದೂ, ಗುಜರಾತ್‌ ಹಾಗೂ ಹಿಮಾಚಲ ಪ್ರದೇಶದಲ್ಲಿ ಕ್ರಮವಾಗಿ 3 ನೇ ಹಾಗೂ ನಾಲ್ಕನೇ ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ನರೇಂದ್ರ ಮೋದಿ ಚಾಲನೆ ನೀಡಿದ್ದರು.* "ಇಂಟರ್‌ ಸಿಟಿ ಸಂಪರ್ಕ ಹಾಗೂ ವಾಣಿಜ್ಯ ಚಟುವಟಿಕೆಗಳಗೆ ದೊಡ್ಡ ಬೂಸ್ಟ್‌, 5ನೇ ವಂದೇ ಭಾರತ್ ಎಕ್ಸ್‌ಪ್ರೆಸ್‌ ನವೆಂಬರ್‌ 10 ರಂದು ಚಾಲನೆ ಸಿಗಲಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನ ಟರ್ಮಿನಲ್‌ 2 ಹಾಗೂ ಕೆಂಪೇಗೌಡರ ಪ್ರತಿಮೆಯನ್ನೂ ಅದೇ ದಿನ ಅನಾವರಣ ಮಾಡಲಾಗುತ್ತದೆ' ಎಂದು ಅಶ್ವತ್ಥ ನಾರಾಯಣ ಟ್ವೀಟ್‌ ಮೂಲಕ ಹೇಳಿದ್ದಾರೆ.