Job Description: * ಕೊವೀಡ್ (Corona) ನಂತರ ಹೆಚ್ಚಳವಾಗಿದ್ದ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ರೋಜ್‌ಗಾರ್ ಮೇಳಕ್ಕೆ (Rozgar Mela) ಚಾಲನೆ ನೀಡಿದರು. * 2023ರ ವೇಳೆಗೆ 10 ಲಕ್ಷ ಸರ್ಕಾರಿ ಉದ್ಯೋಗ ನೀಡುವ ಗುರಿ ಹೊಂದಿರುವ ನಮೋ ಸರ್ಕಾರ ಮಿಷನ್ ಮೋಡ್ ನೇಮಕಾತಿಗೆ ಸೂಚನೆ ನೀಡಿದೆ.* ನಿರುದ್ಯೋಗ ಸಮಸ್ಯೆ ಭಾರತವನ್ನು ಸಾಕಷ್ಟು ಬಾಧಿಸುತ್ತಿದೆ. ಕೋವಿಡ್ ಬಳಿಕ ಈ ಸಮಸ್ಯೆ ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ವ್ಯಾಪಿಸಿದೆ. * ಯುವಕರು ಕೆಲಸ ಇಲ್ಲದೇ ಪರಿತಪಿಸುತ್ತಿದ್ದಾರೆ. ಈ ನಿರುದ್ಯೋಗ ಸಮಸ್ಯೆಯನ್ನೇ ಮುಂದಿಟ್ಟುಕೊಂಡು ವಿಪಕ್ಷಗಳು ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡುತ್ತಿವೆ.* ದೇಶದಲ್ಲಿ ಮುಂದಿನ 18 ತಿಂಗಳು ಅಂದರೆ 2023ರ ವೇಳೆಗೆ 10ಲಕ್ಷ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ. * ಇದಕ್ಕೆ ಪೂರಕ ಎನ್ನುವಂತೆ ಇಂದು 75 ಸಾವಿರ ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಪತ್ರವನ್ನು ಹಂಚಿಕೆ ಮಾಡಿದರು.* ಈ ವೇಳೆ ಮಾತನಾಡಿದ ಅವರು, ಗ್ರೂಪ್ ಎ ಮತ್ತು ಬಿ (ಗೆಜೆಟೆಡ್), ಗ್ರೂಪ್ ಬಿ (ನಾನ್ ಗೆಜೆಟೆಡ್) ಮತ್ತು ಸಿ ಗುಂಪಿನಲ್ಲಿ ವಿವಿಧ ಹಂತಗಳಲ್ಲಿ ವಿಂಗಡಿಸಲಾಗಿದೆ.* ಅವರನ್ನು ಕೇಂದ್ರ ಸಶಸ್ತ್ರ ಪಡೆಗಳ ಸಿಬ್ಬಂದಿ, ಸಬ್ ಇನ್ಸ್‌ಪೆಕ್ಟರ್‌ಗಳು, ಕಾನ್ಸ್‌ಟೇಬಲ್‍ಗಳು, ಎಲ್‍ಡಿಸಿಗಳು, ಸ್ಟೆನೋಗ್ರಾಫರ್‌ಗಳು, ಪಿಎಗಳು, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಹುದ್ದೆಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.* 8 ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದೆ, ಇವುಗಳಿಗೆ ತ್ವರಿತವಾಗಿ ನೇಮಕಾತಿ ಮಾಡಲಾಗುವುದು. ಸರ್ಕಾರಿ ಉದ್ಯೋಗಗಳು ಮಾತ್ರವಲ್ಲದೇ ಸ್ಕಿಲ್ ಇಂಡಿಯಾ ಮೂಲಕ ಯುವಕರನ್ನು ಸದೃಢ ಮಾಡಲಾಗುತ್ತಿದೆ. * 8 ಕೋಟಿ ಮಹಿಳೆಯರು ಸ್ವಸಹಾಯ ಗುಂಪುಗಳ ಮೂಲಕ ಸರ್ಕಾರದ ನೆರವು ಪಡೆದು ಆರ್ಥಿಕವಾಗಿ ಬಲಿಷ್ಠರಾಗಿದ್ದಾರೆ ಎಂದರು.* ಕೊರೊನಾ ನಂತರ ವಿಶ್ವಾದ್ಯಂತ ಹಲವಾರು ದೇಶಗಳು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳ ಹೊಡೆತವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. * ಯುವಜನರಿಗೆ ಗರಿಷ್ಠ ಉದ್ಯೋಗವಕಾಶವನ್ನು ಸೃಷ್ಟಿಸಲು ಕೇಂದ್ರವು ಅನೇಕ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.