Job Description: * ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ನೂತನ ಅಧ್ಯಕ್ಷರನ್ನಾಗಿ ಕೆ.ನಾಗಣ್ಣಗೌಡ ರವರನ್ನು ನೇಮಕ ಮಾಡಲಾಗಿದೆ, ಇವರ ಅಧಿಕಾರಾವಧಿ 3 ವರ್ಷ.* ನಾಗಣ್ಣಗೌಡ ರವರು 2016 ರಿಂದ 2018 ರವರೆಗೆ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. * ಸಾಕ್ಷರತಾ ಆಂದೋಲನದಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಸೇವಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು.* ನಾಗಣ್ಣಗೌಡ ರವರು "ಧ್ವನಿ" ಎಂಬ ಸ್ವಯಂ ಸೇವಾ ಸಂಸ್ಥೆ ಸ್ಥಾಪಿಸಿ ಮಕ್ಕಳ ಪರ ಚಟುವಟಿಕೆ ನಡೆಸಿದ್ದರು. - ಶಾಲೆ ಬಿಟ್ಟ ಮಕ್ಕಳಿಗೆ ಶಿಕ್ಶಣ ಕುರಿತು ಅಭಿಯಾನ ನಡೆಸಿದ್ದರು. - ಬೀದಿ ನಾಟಕ ಆಯೋಜಿಸಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. * ನಾಗಣ್ಣಗೌಡ ರವರು "ಮೂರೂ ದಶಕಗಳಿಗೂ ಹೆಚ್ಚು ಕಾಲ ಮಕ್ಕಳ ಅಭಿವೃದ್ಧಿ ಚಟುವಟಿಕೆಯಲ್ಲಿ ಕೆಲಸ ಮಾಡಿದ್ದೇನೆ, ಪ್ರಸ್ತುತ ಸಂದರ್ಭದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯುವದು ನನ್ನ ಪ್ರಮುಖ ಆದ್ಯತೆಯಾಗಿದೆ" ಎಂದು ಹೇಳಿದರು.