Job Description: * ಅಕ್ಟೋಬರ್ 27 ರಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಪಂದ್ಯದ ವೇತನ (ಒಪ್ಪಂದ) ಸಮಾನವಾಗಿರುತ್ತದೆ ಎಂದು ಮಹತ್ವದ ಘೋಷಣೆ ಮಾಡಿದೆ. * ಮ್ಯಾಚ್’ನ ವೇತನ ವಿಚಾರದಲ್ಲಿ ಮಹಿಳಾ ಕ್ರಿಕೆಟಿಗರನ್ನು ಪುರುಷ ಕ್ರಿಕೆಟಿಗರಿಗೆ ಸರಿಸಮಾನವಾಗಿ ನೋಡುವ ನಿರ್ಧಾರವು ಕ್ರಾಂತಿಕಾರಿಯಾಗಿದೆ, ಒಪ್ಪಂದ ಮಾಡಿಕೊಂಡಿರುವ ಹಿರಿಯ ಮಹಿಳಾ ಕ್ರಿಕೆಟಿಗರು ಪುರುಷರಿಗೆ ಸಮಾನವಾದ ವೇತನವನ್ನು ಪಡೆಯುತ್ತಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಖಚಿತಪಡಿಸಿದ್ದಾರೆ.* ನಮ್ಮ ಒಪ್ಪಂದದ ಮೂಲಕ ಮಹಿಳಾ ಕ್ರಿಕೆಟಿಗರಿಗೆ ವೇತನದಲ್ಲಿ ಸಮಾನತೆಯನ್ನು ತರುತ್ತಿದ್ದೇವೆ, ನಾವು ಲಿಂಗ ಸಮಾನತೆಯ ಹೊಸ ಯುಗಕ್ಕೆ ಹೋದಂತೆ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಪಂದ್ಯದ ವೇತನ ಸಮಾನವಾಗಿರುತ್ತದೆ ಎಂದು ಜಯ್ ಶಾ ರವರು ಹೇಳಿದ್ದಾರೆ. * ಕ್ರಿಕೆಟ್’ನಲ್ಲಿ ಮಹಿಳಾ ಕ್ರಿಕೆಟಿಗರಿಗೆ ಮತ್ತು ಪುರುಷ ಕ್ರಿಕೆಟಿಗರಿಗೆ ಸಮಾನವಾದ ವೇತನವನ್ನು ನೀಡಲಾಗುತ್ತದೆ. - ಟೆಸ್ಟ್ ಪಂದ್ಯಕ್ಕೆ 15 ಲಕ್ಷ - ಏಕದಿನ ಪಂದ್ಯಕ್ಕೆ 6 ಲಕ್ಷ - ಟಿ20 ಪಂದ್ಯಕ್ಕೆ 3 ಲಕ್ಷ ರೂ ಅನ್ನು ಮಹಿಳಾ ಕ್ರಿಕೆಟಿಗರಿಗೂ ಪಾವತಿಸುವುದು ನನ್ನ ಬದ್ಧತೆಯಾಗಿದೆ ಮತ್ತು ಅವರನ್ನು ಬೆಂಬಲಿಸಿದಕ್ಕಾಗಿ ನಾನು ಅಪೆಕ್ಸ್ ಕೌನ್ಸಿಲ್’ಗೆ ಧನ್ಯವಾದ ಸಮರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.* ಈ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯು ಇದೇ ರೀತಿಯ ನಿರ್ಧಾರವನ್ನು ತೆಗೆದುಕೊಂಡಿದ್ದು, ಮಹಿಳಾ ರಾಷ್ಟ್ರೀಯ ತಂಡ ಮತ್ತು ದೇಶೀಯ ಮಹಿಳಾ ಆಟಗಾರರು ಪುರುಷರಿಗೆ ಸಮಾನವಾದ ಪಂದ್ಯ ಶುಲ್ಕವನ್ನು ಪಡೆಯುತ್ತಿದ್ದಾರೆ ಎಂದು ಘೋಷಿಸಿತ್ತು.