Job Description: * ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತವಾಗಿ 67 ಜನ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಡಲಾಗಿದೆ. * ಸಾಹಿತ್ಯ, ವಿಜ್ಞಾನ, ಸಮಾಜ ಸೇವೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಗಣ್ಯರನ್ನು ಪ್ರಶಾತಿಗೆ ಆಯ್ಕೆ ಮಾಡಲಾಗಿದೆ. * ಅಕ್ಟೋಬರ್ 30 ರಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ರವರು ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದರು, ನವೆಂಬರ್ 01 ರಂದು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. * ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಾಜಿ ನಿರ್ದೇಶಕ ಕೆ ಶಿವನ್, ಹೂವಿನಹಡಗಲಿ ಪೌರಕಾರ್ಮಿಕ ಮಹಿಳೆ ಮಲ್ಲಮ್ಮ, ಸಾಹಿತಿಗಳಾದ ಪ್ರೊ.ಅ.ರಾ.ಮಿತ್ರ, ಪ್ರೊ.ಎಂ.ಕೃಷ್ಣೇಗೌಡ, ಸೋಲಿಗರ ಮಾದಮ್ಮ ಇನ್ನು ಹಲವಾರು ಸಾಧಕರು ಪಟ್ಟಿಯಲ್ಲಿದ್ದಾರೆ.* ಸಚಿವ ಸುನಿಲ್ ಕುಮಾರ್ ಅಧ್ಯಕ್ಷತೆಯ ಆಯ್ಕೆ ಸಲಹಾ ಸಮೀತಿ ಹಲವು ಹೆಸರುಗಳನ್ನು ಶಿಫಾರಸ್ಸು ಮಾಡಿತ್ತು, ಮುಖ್ಯಮಂತ್ರಿ ಅಧ್ಯಕ್ಷತೆಯ ಉನ್ನತ ಮಟ್ಟದ ಸಭೆಯಲ್ಲಿ ಪುರಸ್ಕೃತ ಪಟ್ಟಿಯನ್ನು ಅಂತಿಮಗೊಳಿಸಲಾಯಿತು. * ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ 5 ಲಕ್ಷ ನಗದು ಮತ್ತು 25 ಗ್ರಾಂ ಚಿನ್ನ ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತದೆ.