Job Description: * ನವೆಂಬರ್ 1 ರಿಂದ ದೇಶದ ಮೊದಲ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಬಳಕೆಯು ಆರಂಭವಾಗಲಿದೆ, ಆರಂಭಿಕ ಹಂತದಲ್ಲಿ ಸರ್ಕಾರಿ ಟ್ರೆಷರಿ ಬಿಲ್, ಬಾಂಡ್ ವಹಿವಾಟುಗಳಲ್ಲಿ ಈ ವರ್ಚುವಲ್ ಕರೆನ್ಸಿ ಬಳಕೆ ಮಾಡಲು ಅವಕಾಶ ಇದೆ. * ಭಾರತದ ಹಲವಾರು ಬ್ಯಾಂಕ್ ಗಳು ಡಿಜಿಟಲ್ ರೂಪಾಯಿ ನೀಡಲಿವೆ. ಎಸ್‌ಬಿಐ, ಬರೋಡ, ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾ, ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್, ಯೆಸ್ ಬ್ಯಾಂಕ್‌, ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಮತು ಎಚ್‌ಎಸ್‌ಬಿಸಿ.* ಪ್ರಾಯೋಗಿಕ ರಿಟೇಲ್ ವಹಿವಾಟು ದೇಶದ ಕೆಲವು ಆಯ್ದ ಪ್ರದೇಶಗಳಲ್ಲಿ, ಕೆಲವು ಗ್ರಾಹಕರು ಮತ್ತು ವ್ಯಾಪಾರಿಗಳ ನಡುವೆ ಒಂದು ತಿಂಗಳಲ್ಲಿ ಆರಂಭವಾಗಲಿದೆ. * ಪ್ರಾಯೋಗಿಕ ಬಳಕೆಯಲ್ಲಿ ಸಿಗುವ ಅನುಭವ ಆಧರಿಸಿ ಇತರ ಸಗಟು ವಹಿವಾಟುಗಳಲ್ಲಿ ಹಾಗೂ ಬೇರೆ ಬೇರೆ ದೇಶಗಳಲ್ಲಿ ಇರುವವರ ನಡುವಿನ ಪಾವತಿಗಳಲ್ಲಿ ಇದನ್ನು ಬಳಸಲು ಆದ್ಯತೆ ನೀಡಲಾಗುತ್ತದೆ.* ಸಿಬಿಡಿಟಿ ಎಂಬುದು ಕೇಂದ್ರೀಯ ಬ್ಯಾಂಕ್ ಹೊರಡಿಸುವ ಡಿಜಿಟಲ್ ಕರೆನ್ಸಿ, 2022 ಫೆಬ್ರುವರಿ 1 ರಂದು ಮಂಡಿಸಿದ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಸಿಬಿಡಿಸಿ ಚಲಾವಣೆಗೆ ತರುವ ಘೋಷಣೆ ಮಾಡಿತ್ತು.* ಜಾಗತಿಕವಾಗಿ 60 ಕ್ಕೂ ಕೇಂದ್ರೀಯ ಬ್ಯಾಂಕ್‌ಗಳು ಸಿಬಿಡಿಸಿ ಬಗ್ಗೆ ಆಸಕ್ತಿ ತೋರಿವೆ, ಕೆಲವು ದೇಶಗಳಲ್ಲಿ ಈ ಕರೆನ್ಸಿಯನ್ನು ಚಲಾವಣೆಗೆ ತರುವ ಪ್ರಾಯೋಗಿಕ ಕಾರ್ಯ ನಡೆದಿದೆ.