Job Description: * ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಗುಜರಾತ್‌ನ ಪಂಚಮಹಲ್‌ನ ಜಂಬುಘೋಡಾದಲ್ಲಿ ಇಂದು ಸುಮಾರು 860 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಪೂರ್ಣಗೊಂಡ ಯೋಜನೆಗಳನ್ನು ಲೋಕಾರ್ಪಣೆ ನೆರವೇರಿಸಿದರು.* "ಈ ಭಾಗದ ಇಡೀ ಪ್ರದೇಶದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸೇವೆಗೆ ಸಂಬಂಧಪಟ್ಟಂತೆ ನೂರಾರು ಕೋಟಿ ರೂ. ಮೊತ್ತದ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯವನ್ನು ನೆರವೇರಿಸಲಾಗಿದೆ.* ಗೋವಿಂದ ಗುರು ವಿಶ್ವವಿದ್ಯಾಲಯದ ಹೊಸ ಆಡಳಿತಾತ್ಮಕ ಕ್ಯಾಂಪಸ್‌ ಹಾಗೂ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣದಂತಹ ಯೋಜನೆಗಳು ನಮ್ಮ ಬುಡಕಟ್ಟು ಮಕ್ಕಳಿಗೆ ಬಹಳ ಉಪಯುಕ್ತವಾಗಲಿವೆ,ʼʼ ಎಂದು ಮೋದಿಯವರು ಹೇಳಿದರು.* ಗುಜರಾತ್‌ನಲ್ಲಿ ಬಹಳ ಹಿಂದೆಯೇ ಶಾಲೆಗಳಿಗೆ ಹುತಾತ್ಮರ ಹೆಸರು ನಾಮಕರಣ ಮಾಡುವ ಸಂಪ್ರದಾಯ ಶುರು ಮಾಡಿರುವುದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ವಡೇಕ್‌ ಹಾಗೂ ದಾಂಡಿಯಾಪುರದ ಪ್ರಾಥಮಿಕ ಶಾಲೆಗಳಿಗೆ ಸಂತ ಜೊರಿಯಾ ಪರಮೇಶ್ವರ್‌ ಹಾಗೂ ರೂಪ್‌ ಸಿಂಗ್‌ ನಾಯಕ ಅವರ ಹೆಸರಿಡಲಾಗಿದೆ. * ಇಂದು ಆ ಶಾಲೆಗಳು ಸಂಪೂರ್ಣ ಹೊಸ ರೂಪ ಪಡೆದುಕೊಂಡಿವೆ. ಈ ಎರಡೂ ಶಾಲೆಗಳಲ್ಲಿ ಬುಡಕಟ್ಟು ಸಮುದಾಯದ ಇಬ್ಬರೂ ವೀರರ ಪ್ರತಿಮೆ ಅನಾವರಣಗೊಂಡಿದ್ದು, ಶಿಕ್ಷಣ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಬುಡಕಟ್ಟು ಸಮಾಜದ ಕೊಡುಗೆಗಳನ್ನು ಸಾರುವ ಪ್ರಮುಖ ಕೇಂದ್ರಗಳಾಗಿ ಹೊರಹೊಮ್ಮಿವೆ ಎಂದು ಹೇಳಿದರು.* ಎರಡು ದಶಕಗಳ ಹಿಂದೆ ಗುಜರಾತ್‌ ರಾಜ್ಯಕ್ಕೆ ಸೇವೆ ಸಲ್ಲಿಸಲು ಅವಕಾಶ ಸಿಕ್ಕ ಸಂದರ್ಭದಲ್ಲಿ ಅದಕ್ಕೂ ಹಿಂದಿನ ಸರಕಾರಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಲ್ಲಿದ್ದ ಕೊರತೆಯನ್ನು ಪ್ರಧಾನ ಮಂತ್ರಿಗಳು ಸ್ಮರಿಸಿದರು. * ಬುಡಕಟ್ಟು ಜನರು ನೆಲೆಸಿರುವ ಪ್ರದೇಶದಲ್ಲಿ ಶಿಕ್ಷಣ, ಪೋಷಣೆ ಹಾಗೂ ಕುಡಿಯುವ ನೀರಿನಂತಹ ಮೂಲಭೂತ ಸೌಕರ್ಯಗಳ ಕೊರತೆ ವ್ಯಾಪಕವಾಗಿತ್ತು. "ಆ ಪರಿಸ್ಥಿತಿಯನ್ನು ನಿಭಾಯಿಸಲು, ʼಸಬ್ಕಾ ಪ್ರಯಾಸ್‌ʼ ಸ್ಫೂರ್ತಿಯೊಂದಿಗೆ ನಾವು ಕಾರ್ಯನಿರ್ವಹಿಸಲಾರಂಭಿಸಿದೆವು, ನಮ್ಮ ಬುಡಕಟ್ಟು ಸಹೋದರರು ಹಾಗೂ ಸಹೋದರಿಯರು ಬದಲಾವಣೆಯ ಹಾದಿಯತ್ತ ಹೆಜ್ಜೆ ಹಾಕಿದರು. ಅವರ ಸ್ನೇಹಿತನಂತೆ ಸರಕಾರ ಅವರಿಗೆ ಸಾಧ್ಯವಿರುವ ಎಲ್ಲ ಬಗೆಯ ನೆರವು ಒದಗಿಸಿತು,ʼʼ ಎಂದು ಹೇಳಿದರು.* ಬುಡಕಟ್ಟು ಜನರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳಲ್ಲಿ ಪ್ರಾಥಮಿಕ ಹಂತದಿಂದ ಮಾಧ್ಯಮಿಕ ಹಂತದವರೆಗೆ 10,000 ಹೊಸ ಶಾಲೆಗಳ ಆರಂಭ, ಡಜನ್‌ಗೂ ಹೆಚ್ಚು ಏಕಲವ್ಯ ಮಾದರಿ ಶಾಲೆಗಳು, ವಿದ್ಯಾರ್ಥಿನಿಯರಿಗಾಗಿ ವಿಶೇಷ ವಸತಿ ಶಾಲೆಗಳು ಹಾಗೂ ಆಶ್ರಮ ಶಾಲೆಗಳನ್ನು ಆರಂಭಿಸಿರುವುದನ್ನು ಪ್ರಧಾನ ಮಂತ್ರಿಗಳು ಉದಾಹರಣೆಯಾಗಿ ನೀಡಿದರು.* ಶಾಲೆಗಳಲ್ಲಿ ಪೌಷ್ಟಿಕ ಆಹಾರ ವಿತರಣೆ ಜತೆಗೆ ಹೆಣ್ಣು ಮಕ್ಕಳು ಶಾಲೆಗೆ ಹೋಗಿ ಬರಲು ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿರುವುದನ್ನು ಅವರು ಉಲ್ಲೇಖಿಸಿದರು.* ಶಾಲೆಗಳಲ್ಲಿ ವೈಜ್ಞಾನಿಕ ಶಿಕ್ಷಣದ ಕೊರತೆಯ ಸವಾಲಿನ ಬಗ್ಗೆಯೂ ಪ್ರಧಾನ ಮಂತ್ರಿ ಮೋದಿಯವರು ಕಳೆದ ಎರಡು ದಶಕಗಳಲ್ಲಿ ಬುಡಕಟ್ಟು ಸಮುದಾಯದವರು ಹೆಚ್ಚಿರುವ ಜಿಲ್ಲೆಗಳಲ್ಲಿ 11 ವಿಜ್ಞಾನ ಕಾಲೇಜುಗಳು, 11 ವಾಣಿಜ್ಯ ಕಾಲೇಜುಗಳು, 23 ಕಲಾ ಕಾಲೇಜುಗಳು ಹಾಗೂ ನೂರಾರು ಹಾಸ್ಟೆಲ್‌ಗಳನ್ನು ತೆರೆಯಲಾಗಿದೆ ಎಂದು ವಿವರಿಸಿದರು.* 20- 25 ವಷಗಳ ಹಿಂದೆ ಬುಡಕಟ್ಟು ಜನರಿರುವ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಶಾಲೆಗಳ ಕೊರತೆಯಿದ್ದುದರ ಕುರಿತು ಬೆಳಕು ಚೆಲ್ಲಿದ ಪ್ರಧಾನ ಮಂತ್ರಿಗಳು, “ಇಂದು ಎರಡು ಬುಡಕಟ್ಟು ವಿಶ್ವವಿದ್ಯಾಲಯಗಳಿದ್ದು, ಗೋಧ್ರಾದಲ್ಲಿ ಗೋವಿಂದ ಗುರು ವಿಶ್ವವಿದ್ಯಾಲಯ ಹಾಗೂ ನರ್ಮದಾದಲ್ಲಿರುವ ಬಿರ್ಸಾ ಮುಂಡಾ ವಿಶ್ವವಿದ್ಯಾಲಯಗಳು ಉನ್ನತ ಶಿಕ್ಷಣದಲ್ಲಿ ಅತ್ಯುನ್ನತ ಸಂಸ್ಥೆಗಳಾಗಿವೆ,ʼʼ ಎಂದು ಹೇಳಿದರು.