Job Description: * ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರರನ್ನು ಸೆಳೆಯುವ ನಿಟ್ಟಿನಲ್ಲಿ ಹಾಗೂ ಹೆಚ್ಚು ಉದ್ದಿಮೆಗಳನ್ನು ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ 2002ರ ಕೈಗಾರಿಕಾ ಸೌಲಭ್ಯ ಕಾಯ್ದೆಗೆ ತಿದ್ದುಪಡಿ ತರುವ ಮೂಲಕಕೈಗಾರಿಕೆಗಳಸ್ಥಾಪನೆಗೆ ಇದ್ದ ತೊಡಕುಗಳನ್ನು ನಿವಾರಿಸಿದೆ. * ಕೈಗಾರಿಕೆಗಳ ಸ್ಥಾಪನೆಗೆ ನಿಯಮಗಳನ್ನು ಸರಳಗೊಳಿಸುವ ನಿಟ್ಟಿನಲ್ಲಿ 'ಕರ್ನಾಟಕ ರಾಜ್ಯ ಕೈಗಾರಿಕಾ ಸೌಲಭ್ಯಗಳ ಅಧಿನಿಯಮ 2020' ಜಾರಿಗೊಳಿಸಿದ ಪ್ರಥಮ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆ ಪಡೆದಿದೆ. * ತಿದ್ದುಪಡಿ ಮೂಲಕ ಕೈಗಾರಿಕಾ ಸ್ಥಾಪಿಸಲು ಕೈಗಾರಿಕೋದ್ಯಮಿಗಳು ವಿವಿಧ ಇಲಾಖೆಗಳಿಗೆ ಅಲೆದಾಡಬೇಕಾದ ಅವಶ್ಯಕತೆಯಿಲ್ಲ, ಜಿಲ್ಲಾ ಸಮಿತಿ ಹಾಗೂ ರಾಜ್ಯ ಸಮಿತಿಯಿಂದ ಕೈಗಾರಿಕಾ ಸ್ಥಾಪನೆಗೆ ಅನುಮತಿ ಪಡೆದ ಕೂಡಲೇ, ಕಾಮಗಾರಿ ಆರಂಭ ಮಾಡಿ, ಮೂರು ವರ್ಷಗಳ ಕಾಲಾವಕಾಶದಲ್ಲಿ ಇತರ ಎಲ್ಲಾ ಅನುಮತಿಗಳನ್ನು ಪಡೆದುಕೊಳ್ಳಲು ಈ ತಿದ್ದುಪಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.* ಕೈಗಾರಿಕೆಗಳ ಸ್ಥಾಪನೆ ಪ್ರಕ್ರಿಯೆ ಆರಂಭ ಮಾಡುವ ಸಂದರ್ಭದಲ್ಲಿ ತಕ್ಷಣ ಅನುಮತಿ ಪಡೆಯಲು ತೊಡಕಾಗದಂತೆ ಕರ್ನಾಟಕ ಕೈಗಾರಿಕಾ ಸೌಲಭ್ಯ ಅಧಿನಿಮಯ 2002ರ ಈ ತಿದ್ದುಪಡಿಯನ್ನು ಜಾರಿ ತರಲಾಗಿದೆ.