Job Description: * ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಶೇ 10 ರಷ್ಟು ಮೀಸಲಾತಿ ನೀಡಬೇಕೆಂದು ಸಂವಿಧಾನದ 103 ನೇ ತಿದ್ದುಪಡಿಯ ಪ್ರಕಾರ ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ನೀಡಲಾಗಿದೆ. * ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಸೆಪ್ಟೆಂಬರ್ 27 ರಂದು ಅರ್ಜಿ ವಿಚಾರಣೆ ನಡೆಸಿ, ಮುಂದುವರೆದ ಜಾತಿಗಳಲ್ಲಿನ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮೀಸಲಾತಿ ನೀಡುವುದು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸಿದೆಯೇ ಎಂಬ ಕಾನೂನಾತ್ಮಕ ಪ್ರಶ್ನೆಯ ಬಗ್ಗೆ ತೀರ್ಪನ್ನು ಕಾಯ್ದಿರಿಸಿತ್ತು.* 2019 ರ ಸಾರ್ವತ್ರಿಕ ಚುನಾವಣೆಯ ಮೊದಲು ಈ ಮೀಸಲಾತಿಯನ್ನು ಕೇಂದ್ರ ಸರ್ಕಾರ ಪರಿಚಯಿಸಿತ್ತು, ವಿಚಾರಣೆ ನಡೆಸಿದ ಐವರು ನ್ಯಾಯಮೂರ್ತಿಗಳಲ್ಲಿ ನಾಲ್ವರು ನ್ಯಾಯಮೂರ್ತಿಗಳು ಮೀಸಲಾತಿ ಪರ ತೀರ್ಪು ನೀಡಿದರು.* ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ಚುನಾವಣೆಗಳಲ್ಲಿ ಆಡಳಿತಾರೂಢ ಬಿಜೆಪಿ ಸೋತ ನಂತರ ಕೇಂದ್ರದಿಂದ ಜನವರಿ 2019 ರಲ್ಲಿ 103 ನೇ ಸಾಂವಿಧಾನಿಕ ತಿದ್ದುಪಡಿಯ ಮೂಲಕ ಕೋಟಾವನ್ನು ಪರಿಚಯಿಸಲಾಗಿತ್ತು, ಆದರೆ ಈ ಕೇಂದ್ರ ಸರ್ಕಾರದ ಈ ನಿಲುವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.