Job Description: * ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2 ನೇ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು. * ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದಕ್ಷತೆಯನ್ನು ದ್ವಿಗುಣಗೊಳಿಸುವ ಸಾಮರ್ಥ್ಯ ಹೊಂದಿದೆ. ಹೈಟೆಕ್ ತಂತ್ರಜ್ಞಾನ, ಸುಸ್ಥಿರತೆ ತತ್ವಗಳ ಅತ್ಯಾಧುನಿಕ ವಿನ್ಯಾಸವನ್ನು ಈ ಟರ್ಮಿನಲ್ ಹೊಂದಿದೆ.* ಪರಿಸರ ಸ್ನೇಹಿ ಹಾಗೂ ಪ್ರಯಾಣಿಕ ಸ್ನೇಹಿಯಾಗಿದೆ. ಅಷ್ಟೇ ಅಲ್ಲದೆ, ಟರ್ಮಿನಲ್ 2 ಕರ್ನಾಟಕ ಪರಂಪರೆಯನ್ನು ಹಾಗೂ ಸಂಸ್ಕೃತಿಯ ಥೀಮ್ ಒಳಗೊಂಡಿದೆ. * 13,000 ಕೋಟಿ ವೆಚ್ಚದಲ್ಲಿ ಟರ್ಮಿನಲ್ 2 ಸ್ಥಾಪನೆ ಮಾಡಲಾಗಿದೆ. ಉದ್ಘಾಟನೆ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಉಪಸ್ಥಿತರಿದ್ದರು.* ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕರ್ನಾಟಕದ ಪರಂಪರೆ ಹಾಗೂ ಸಂಸ್ಕೃತಿಯ ಪ್ರತಿಬಿಂಬವಾಗಿದೆ.