Job Description: * ಅತ್ಯಂತ ಕಡಿಮೆ ವೆಚ್ಚದಲ್ಲಿ ಕಾಶಿ ವಿಶ್ವನಾಥ ಹಾಗೂ ಅಯೋಧ್ಯ ರಾಮಲಲ್ಲಾ ದೈವ ಭೂಮಿಯ ವೈಭವ ಸವಿಯುವ ಅವಕಾಶಕ್ಕಾಗಿ ಕರ್ನಾಟಕ ಭಾರತ್ ಗೌರವ್‌ ಕಾಶಿ ದರ್ಶನ ರೈಲಿಗೆ ಚಾಲನೆ ನೀಡಲಾಗಿದೆ. * 8 ದಿನಗಳ ಕಾಲದ ಈ ಟೂರ್‌ ಪ್ಯಾಕೇಜ್‌ನಲ್ಲಿ ಎಲ್ಲಾ ಸವಲತ್ತುಗಳನ್ನು ಒಳಗೊಂಡಿರಲಿದೆ. ಟ್ರೈನ್‌ ದರ, ಪ್ರವಾಸಿ ಸ್ಥಳಗಳಲ್ಲಿ ಅಗತ್ಯವಿರುವ ಬಸ್‌ ವ್ಯವಸ್ಥೆ, ಉಳಿದುಕೊಳ್ಳಲು ಹೋಟೇಲ್‌, ಮತ್ತು 8 ದಿನಗಳಲ್ಲಿ ಊಟ ಮತ್ತು ತಿಂಡಿ ವ್ಯವಸ್ಥೆ ಹಾಗೂ ವಿಮೆಯನ್ನು ಸಹ ಈ ಪ್ಯಾಕೇಜ್‌ ಒಳಗೊಂಡಿರಲಿದೆ.* ಭಾರತ್ ಗೌರವ್‌ ಕಾಶಿ ದರ್ಶನ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದರು. ನಗರದ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಪ್ರಧಾನಿ ಮೋದಿ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತರಿದ್ದರು.* ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ವಿಶೇಷತೆಗಳು - ಭವ್ಯ ಕಾಶಿ – ದಿವ್ಯ ಕಾಶಿಯನ್ನು ರಾಜ್ಯದ ಜನರು ಕಡಿಮೆ ವೆಚ್ಚದಲ್ಲಿ ಕಣ್ತುಂಬಿಕೊಳ್ಳಲಿ ಎನ್ನುವ ಪ್ರಮುಖ ಉದ್ದೇಶದಿಂದ ಈ ರೈಲು ಪ್ರವಾಸವನ್ನು ಆಯೋಜಿಸಲಾಗಿದೆ. - ಭಾರತ್‌ ಗೌರವ್‌ ರೈಲು ನವೆಂಬರ್‌ 11, 2022 ಕ್ಕೆ ಹೊರಟು ಕಾಶಿ, ಅಯೋಧ್ಯೆ ಮತ್ತು ಪ್ರಯಾಗರಾಜ್‌ಗಳ ಪ್ರವಾಸ ಮುಗಿಸಿ ನವೆಂಬರ್‌ 18, 2022 ಕ್ಕೆ ವಾಪಾಸ್‌ ಬೆಂಗಳೂರಿಗೆ ಬರಲಿದೆ. - ಬೆಂಗಳೂರಿನಿಂದ ಹೊರಡುವ ಈ ರೈಲನ್ನು ಹತ್ತಲು ಉತ್ತರ ಕರ್ನಾಟಕದ ಪ್ರಮುಖ ನಿಲ್ದಾಣಗಳಲ್ಲೂ ಅವಕಾಶ ಕಲ್ಪಿಸಲಾಗಿದೆ. ಈ ರೈಲು ಬೆಂಗಳೂರು, ಬಿರೂರ್‌, ಹಾವೇರಿ, ಹುಬ್ಬಳ್ಳಿ, ಬೆಳಗಾವಿ ಹಾಗೂ ರಾಯಭಾಗ ಮಾರ್ಗವಾಗಿ ಕಾಶಿ, ಅಯೋಧ್ಯ ಮತ್ತು ಪ್ರಯಾಗರಾಜ್‌ ಗೆ ಸಂಚರಿಸಲಿದೆ.