Job Description: * ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಾಲಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್ ಅವರನ್ನು ಭೇಟಿ ಮಾಡಿದರು.* ಇಬ್ಬರೂ ನಾಯಕರು ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದ ಅಡಿಯಲ್ಲಿ ಉಭಯ ದೇಶಗಳ ನಡುವಿನ ಸಂಬಂಧಗಳ ಅತ್ಯುತ್ತಮ ಸ್ಥಿತಿ ಮತ್ತು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಿಯಮಿತವಾಗಿ ನಡೆಯುತ್ತಿರುವ ಉನ್ನತ ಮಟ್ಟದ ಸಂವಾದಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. * ರಕ್ಷಣೆ, ವ್ಯಾಪಾರ, ಶಿಕ್ಷಣ, ಶುದ್ಧ ಇಂಧನ ಮತ್ತು ಉಭಯ ದೇಶದ ಪ್ರಜೆಗಳ ನಡುವಿನ ಬಾಂಧವ್ಯ ಸೇರಿದಂತೆ ವೈವಿಧ್ಯಮಯ ವಲಯಗಳಲ್ಲಿ ಸಹಕಾರವನ್ನು ಗಾಢವಾಗಿಸುವಲ್ಲಿ ಮಾಡಿರುವ ಪ್ರಗತಿಯನ್ನು ಅವರಿಬ್ಬರು ಪರಿಶೀಲಿಸಿದರು. * ಶಿಕ್ಷಣ ಕ್ಷೇತ್ರದಲ್ಲಿ ಸಾಂಸ್ಥಿಕ ಸಹಭಾಗಿತ್ವ, ವಿಶೇಷವಾಗಿ ಉನ್ನತ ಶಿಕ್ಷಣ, ವೃತ್ತಿಪರ ಶಿಕ್ಷಣ, ತರಬೇತಿ ಮತ್ತು ಸಾಮರ್ಥ್ಯ ವೃದ್ಧಿ ಕುರಿತು ವಿವರವಾಗಿ ಚರ್ಚಿಸಲಾಯಿತು.* ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳು, ಸ್ಥಿರ ಮತ್ತು ಶಾಂತಿಯುತ ಇಂಡೋ-ಪೆಸಿಫಿಕ್ ಪ್ರದೇಶ, ಹವಾಮಾನ ಸಂಬಂಧಿತ ವಿಷಯಗಳು ಮತ್ತು ಭಾರತದ ಜಿ20 ಅಧ್ಯಕ್ಷತೆಯ ಕುರಿತು ಉಭಯ ದೇಶಗಳ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.* ಭಾರತಕ್ಕೆ ಪ್ರಧಾನಿ ಅಲ್ಬನೀಸ್ ಅವರು ಭವಿಷ್ಯದಲ್ಲಿ ಆದಷ್ಟು ಬೇಗ ಭೇಟಿ ನೀಡುವುದನ್ನು ಎದುರು ನೋಡುತ್ತಿರುವುದಾಗಿ ಪ್ರಧಾನಮಂತ್ರಿ ಮೋದಿಯವರು ಹೇಳಿದ್ದಾರೆ.