Job Description: * ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಮತ್ತು ಅಂತಿಮ ಟಿ20 ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಪಂದ್ಯ ಡ್ರಾ ಆಗಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಭಾರತ 1-0 ಯಿಂದ ವಶಪಡಿಸಿಕೊಂಡಿದೆ. ಮಳೆಯಿಂದಾಗಿ ಸರಣಿಯ ಮೊದಲ ಪಂದ್ಯವನ್ನು ಆಡಲಾಗಲಿಲ್ಲ. * ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಸರಣಿಯಲ್ಲಿ ಮುನ್ನಡೆ ಸಾಧಿಸಿತ್ತು. ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆತಿಥೇಯರು 19.4 ಓವರ್‌ಗಳಲ್ಲಿ 160 ರನ್‌ಗಳಿಗೆ ಆಲೌಟ್ ಆಗಿದ್ದರು. * ಈ ಗುರಿಯನ್ನು ಬೆನ್ನಟ್ಟಿದ ಭಾರತ ಒಂಬತ್ತು ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು 75 ರನ್ ಗಳಿಸಿತ್ತು. ಆದರೆ ಈ ನಂತರ ಮಳೆ ಬಂದ ಕಾರಣದಿಂದಾಗಿ ಪಂದ್ಯವನ್ನು ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಅಂಪೈರ್‌ಗಳು ಪಂದ್ಯವನ್ನು ಟೈ ಮಾಡಿದರು.* ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಹಾಗೂ ಕೊನೆಯ ಟಿ20 ಸರಣಿಯಲ್ಲಿ ನ್ಯೂಜಿಲೆಂಡ್ ನೀಡಿದ್ದ ಸವಾಲಿನ ಗುರಿ ಬೆನ್ನತ್ತಿದ ಭಾರತ ತಂಡವು ಕೇವಲ 21 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಮೂವರು ಬ್ಯಾಟರ್‌ಗಳ ವಿಕೆಟ್ ಕಳೆದಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.* ಇಶಾನ್ ಕಿಶನ್ ಕೇವಲ 10 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ರಿಷಭ್ ಪಂತ್ ಬ್ಯಾಟಿಂಗ್ 11 ರನ್‌ಗಳಿಗೆ ಸೀಮಿತವಾಯಿತು. ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಖಾತೆ ತೆರೆಯುವ ಮುನ್ನವೇ ಟಿಮ್‌ ಸೌಥಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.* ಈ ವೇಳೆ 4ನೇ ವಿಕೆಟ್‌ಗೆ ಜತೆಯಾದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ 39 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. * ನಾಯಕ ಹಾರ್ದಿಕ್ ಪಾಂಡ್ಯ ಕೇವಲ 18 ಎಸೆತಗಳಲ್ಲಿ 3 ಬೌಂಡರಿ ಹಾಗೂ ಒಂದು ಆಕರ್ಷಕ ಸಿಕ್ಸರ್ ಸಹಿತ ಅಜೇಯ 30 ರನ್ ಬಾರಿಸಿ ರನ್ ವೇಗಕ್ಕೆ ಚುರುಕು ಮುಟ್ಟಿಸಿದರು. ಇನ್ನು ಕಳೆದ ಪಂದ್ಯದಲ್ಲಿ ವಿಸ್ಪೋಟಕ ಶತಕ ಸಿಡಿಸಿದ್ದ ಸೂರ್ಯಕುಮಾರ್ ಯಾದವ್ ಕೇವಲ 13 ರನ್ ಬಾರಿಸಿ ಇಶ್ ಸೋಧಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.* ಪಂದ್ಯ ಟೈನಲ್ಲಿ ಅಂತ್ಯ..?: ಹೌದು, ಕಿವೀಸ್‌ ನೀಡಿದ್ದ ಸವಾಲಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾ 9 ಓವರ್ ಅಂತ್ಯದ ವೇಳೆಗೆ 75 ರನ್ ಬಾರಿಸಿದ್ದು, ನಾಯಕ ಹಾರ್ದಿಕ್ ಪಾಂಡ್ಯ 30 * ಹಾಗೂ ದೀಪಕ್ ಹೂಡಾ 9 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ಇಲ್ಲಿಗೆ ಸ್ಥಗಿತಗೊಂಡರೆ, ಡೆಕ್ವರ್ಥ್ ಲೂಯಿಸ್ ನಿಯಮದನ್ವಯ ಫಲಿತಾಂಶ ಘೋಷಿಸಲಾಗುತ್ತಿದೆ. * ಸದ್ಯ ಡೆಕ್ವರ್ಥ್ ಲೂಯಿಸ್ ನಿಯಮದನ್ವಯ 9 ಓವರ್ ಅಂತ್ಯದ ವೇಳೆಗೆ ಭಾರತ ಗೆಲುವು ಸಾಧಿಸಬೇಕಿದ್ದರೇ 76 ರನ್ ಗಳಿಸಬೇಕಿತ್ತು. ಆದರೆ ಇದೀಗ 75 ರನ್ ಗಳಿಸಿರುವುದರಿಂದ ಪಂದ್ಯವನ್ನು ಟೈ ಎಂದು ಘೋಷಿಸಲಾಗುತ್ತದೆ. ಹೀಗಾದಲ್ಲಿ ಟಿ20 ಸರಣಿ 1-0 ಅಂತರದಲ್ಲಿ ಭಾರತದ ಪಾಲಾಗಲಿದೆ.* ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್ ತಂಡವು ಡೆವೊನ್ ಕಾನ್‌ವೇ ಹಾಗೂ ಗ್ಲೆನ್ ಫಿಲಿಫ್ಸ್ ಬಾರಿಸಿದ ಆಕರ್ಷಕ ಅರ್ಧಶತಕಗಳ ನೆರವಿನಿಂದ 19.4 ಓವರ್‌ಗಳಲ್ಲಿ 160 ರನ್ ಬಾರಿಸಿ ಸರ್ವಪತನ ಕಂಡಿತ್ತು. * ಟೀಂ ಇಂಡಿಯಾ ವೇಗಿಗಳಾದ ಮೊಹಮ್ಮದ್ ಸಿರಾಜ್ ಹಾಗೂ ಆರ್ಶದೀಪ್ ಸಿಂಗ್ ತಲಾ 4 ವಿಕೆಟ್ ಪಡೆದರೆ, ಹರ್ಷಲ್ ಪಟೇಲ್ ಒಂದು ವಿಕೆಟ್ ತಮ್ಮದಾಗಿಸಿಕೊಂಡರು.